ಜಾತಿ ಗಣತಿ : ಇಂದು ಆನ್‌ಲೈನ್‌ ಸಮೀಕ್ಷೆ ಮುಕ್ತಾಯ

6.13 ಕೋಟಿ ಜನರ ಸಮೀಕ್ಷೆ ಪೂರ್ಣ

ಬೆಂಗಳೂರು : ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಕ್ರಿಯೆ ಅಂತಿಮ ಹಂತಕ್ಕೆ ತಲುಪಿದ್ದು, ಆನ್‍ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸೋಮವಾರ(ನ.10) ಕೊನೆಯ ದಿನವಾಗಿದೆ. ಇದುವರೆಗೆ 6.13 ಕೋಟಿ ಜನರ ಸಮೀಕ್ಷೆ ಪೂರ್ಣಗೊಂಡಿದೆ ಎಂದು ಹಿಂದುಳಿದ ವರ್ಗಗಳ ಆಯೋಗವು ಮಾಹಿತಿ ನೀಡಿದೆ.

ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ಪಂಗಡ, ಇತರ ಹಿಂದುಳಿದ ವರ್ಗ ಸೇರಿ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.22ರಿಂದ ಆರಂಭಿಸಲಾಗಿತ್ತು. ಅ.31ರವರೆಗೆ ಸಮೀಕ್ಷಾದಾರರನ್ನು ನೇಮಕ ಮಾಡಿ, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಮೀಕ್ಷೆಯನ್ನು ಮಾಡಲಾಯಿತು. ಕೆಲವು ಜನರು ಸಮೀಕ್ಷೆಯನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ನ.10ವರೆಗೆ ಆನ್‍ಲೈನ್ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯಿಂದ ಉಳಿದವರು https://kscbcselfdeclaration.karnataka.gov.in ವೆಬ್‍ಸೈಟ್‍ಗೆ ಸಂಪರ್ಕಿಸಿ, ಈ ಆನ್‍ಲೈನ್ ಸಮೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಇದುವರೆಗೆ ರಾಜ್ಯದಲ್ಲಿ 6,85,38,000 ಜನರ ಪೈಕಿ 6,13,83,908 ಜನರ ಸಮೀಕ್ಷೆಯು ಪೂರ್ಣಗೊಂಡಿದೆ ಎಂದು ಆಯೋಗ ತಿಳಿಸಿದೆ.





















































 
 
error: Content is protected !!
Scroll to Top