ಮಾಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ವಿಟ್ಲ ಮಾಣಿ ವಲಯದ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಮಾಣಿ ವಲಯ, ಜನಜಾಗೃತಿ ವೇದಿಕೆ ಮಾಣಿ ವಲಯ, ಶ್ರೀ ಶಾರದಾಂಬ ಭಜನಾ ಮಂದಿರ ಅಶೋಕನಗರ ಅಳಕೆಮಜಲು ಇವರ ಸಹಭಾಗಿತ್ವದಲ್ಲಿ ಅಳಕೆಮಜಲು ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯೊಂದಿಗೆ ನಡೆಯಿತು.
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಎಸ್. ಪ್ರಕಾಶ್ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಸತ್ಯನಾರಾಯಣ ಪೂಜೆಯಿಂದ ಸಮಾಜದಲ್ಲಿ ಧಾರ್ಮಿಕ ನಂಬಿಕೆಗಳು ಗಟ್ಟಿಗೊಳಿಸಲು ಸಹಕಾರಿಯಾಗಿದೆ ಎಂದರು.
ಮುಖ್ಯ ಅತಿಥಿ ಜನಜಾಗೃತಿ ವೇದಿಕೆ ನಿಕಟಪೂರ್ವ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ಎಲ್ಲಾ ಕಾರ್ಯಕ್ರಮಗಳು ಅರ್ಥ ಪೂರ್ಣವಾಗಿ ನಡೆಯುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ದ ಯೋಜನಾಧಿಕಾರಿ ಸುರೇಶ್ ಗೌಡ ಮಾತನಾಡಿ, ಧರ್ಮಸ್ಥಳದಿಂದ ನಡೆಯುವ ಕಾರ್ಯಕ್ರಮಗಳ ಕುರಿತು, ದೇಶದ ಪ್ರಮುಖ ಬ್ಯಾಂಕುಗಳ ವ್ಯವಹಾರ ಪ್ರತಿನಿಧಿಯಾಗಿ ಕಡಿಮೆ ಬಡ್ಡಿದರದಲ್ಲಿ ಪ್ರಗತಿ ನಿಧಿ ನೀಡುವುದರೊಂದಿಗೆ ಸ್ವಾವಲಂಬನೆ ಸಾಧಿಸಲು ಸಾಧ್ಯವಾಗಿದೆ ಎಂದರು.
ಮುಖ್ಯ ಅತಿಥಿ ಜನಜಾಗೃತಿ ವಲಯಾಧ್ಯಕ್ಷ ರಾಜಾರಾಮ ಶೆಟ್ಟಿ ಕೋಲ್ಪೆ ಗುತ್ತು , ಶ್ರೀ ಶಾರದಾಂಬ ಭಜನಾ ಮಂದಿರದ ಅಧ್ಯಕ್ಷ ಕೃಷ್ಣ ಕಿಶೋರ್ ಭಟ್ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಶ್ಲಾಘಿಸಿದರು..
ಅಧ್ಯಕ್ಷತೆ ವಹಿಸಿದ್ದ ಪಶು ವೈದ್ಯಾಧಿಕಾರ, ಪೂಜಾ ಸಮಿತಿ ಅಧ್ಯಕ್ಷ ಮಂದಾರ ಜೈನ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ನಡೆಸುವ ಸಾಮಾಜಿಕ ಕೆಲಸಗಳು ಜನರಲ್ಲಿ ಜಾಗೃತಿ ಮೂಡಿಸಲು ಸಹಕಾರಿಯಾಗಿದೆ ಎಂದರು.
ಜನಜಾಗೃತಿ ಸದಸ್ಯ ತನಿಯಪ್ಪ ಗೌಡ, ಮಾಣಿ ವಲಯದ ಒಕ್ಕೂಟಗಳ ವಲಯಾಧ್ಯಕ್ಷ ಸುಧಾಕರ ಸಪಲ್ಯ ಉಪಸ್ಥಿತರಿದ್ದರು.
ಸೇವಾ ಪ್ರತಿನಿಧಿ ಸುಗಂಧಿನಿ ಸ್ವಾಗತಿಸಿ, ಮೇಲ್ವಿಚಾರಕಿ ಆಶಾ ಪಾರ್ವತಿ ವರದಿ ವಾಚಿಸಿ, ವಂದಿಸಿದರು. ಶ್ರೀ ಶಾರದಾಂಬ ಭಜನಾ ಮಂದಿರದ ಸದಸ್ಯ ಉದಯಕುಮಾರ್ ಅಳಕೆಮಜಲು ಕಾರ್ಯಕ್ರಮ ನಿರೂಪಿಸಿದರು.
ಮಾಣಿ ವಲಯದ ಒಕ್ಕೂಟದ ಅಧ್ಯಕ್ಷರುಗಳು,, ಸದಸ್ಯರು ಶೌರ್ಯ ಸದಸ್ಯರು, ಸೇವಾ ಪ್ರತಿನಿಧಿಗಳು ಸಹಕರಿಸಿದರು.
























