ರಾಹುಲ್ ಸಿಕ್ಕರೆ ಸಂಪುಟ ಪುನಾರಚನೆ ಚರ್ಚೆ: ಸಿಎಂ ಸಿದ್ದರಾಮಯ್ಯ

ಮೈಸೂರು: ನವದೆಹಲಿ ಭೇಟಿಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿಕ್ಕಿದಲ್ಲಿ ಸಂಪುಟ ಪುನಾರಚನೆ ಬಗ್ಗೆ ಮಾತುಕತೆ ಮಾಡುತ್ತೇನೆ. ಇಲ್ಲವಾದಲ್ಲಿ ಇಲ್ಲ ಎಂದು ಸಿ ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿ ಪ್ರವಾಸ ಮಾಹಿತಿ ನೀಡಿದ ಅವರು, ನ.15ಕ್ಕೆ ದೆಹಲಿಗೆ ಹೋಗುತ್ತೇನೆ. ಕಪಿಲ್ ಸಿಬಲ್‌ ಅವರ ಕಾರ್ಯಕ್ರಮೆ ಇದ್ದು, ಅದಕ್ಕಾಗಿ ದೆಹಲಿಗೆ ಹೋಗುತ್ತೇನೆ. ಆ ದಿನವೇ ಹೋಗಿ ಮತ್ತೆ ವಾಪಸ್‌ ಬರುವ ಯೋಜನೆ ಇದೆ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೇನೆ. ಅವರು ಸಮಯ ಕೊಟ್ಟರೆ ಅಲ್ಲೇ ಉಳಿದುಕೊಂಡು ಬರುತ್ತೇನೆ. ರಾಹುಲ್ ಗಾಂಧಿ ಸಮಯ ಕೊಟ್ಟರೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಮಾಡುತ್ತೇನೆ. ಇಲ್ಲದಿದ್ದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

error: Content is protected !!
Scroll to Top