ಪೋಕ್ಸೋ ಪ್ರಕರಣ: ಬಿಎಸ್‌ವೈ ವಿರುದ್ಧ ಸಮನ್ಸ್ ರದ್ದು ಮಾಡಲು ಹೈಕೋರ್ಟ್ ನಿರಾಕರಣೆ

ಬೆಂಗಳೂರು: BSY ವಿರುದ್ಧದ ಪೋಕ್ಸೋ ಪ್ರಕರಣವನ್ನು ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದ್ದು, ಇದರಿಂದ ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಮುಖಭಂಗವಾದಂತಿದೆ.

ಇದರಿಂದಾಗಿ ಪೋಕ್ಸೋ ಪ್ರಕರಣಗಳ ತ್ವರಿತ ವಿಚಾರಣಾ ನ್ಯಾಯಾಲಯಕ್ಕೆ BSY ಹಾಜರಾಗಬೇಕಾಗುತ್ತದೆ. ಅನಗತ್ಯ ಸಂದರ್ಭದಲ್ಲಿ ಖುದ್ದು ಹಾಜರಾತಿಯಿಂದ ‌ವಿನಾಯಿತಿ ಕೋರಿ ನ್ಯಾಯಾಲಯಕ್ಕೆ ಆರ್ಜಿ ಸಲ್ಲಿಸುವ ಅವಕಾಶ ಇದ್ದು, ಅದನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆ ತ್ವರಿತ ನ್ಯಾಯಾಲಯಕ್ಕೆ ಸೂಚನೆ ನೀಡಲಾಗಿದೆ.

ಫೆಬ್ರವರಿ 28 ರಂದು ತ್ವರಿತ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿತ್ತು. ಈಗ ಹೈಕೋರ್ಟ್ ಆದೇಶದ ಕಾರಣದಿಂದ ತ್ವರಿತ ನ್ಯಾಯಾಲಯವು ಹೊಸ ದಿನಾಂಕ ನಿಗದಿಪಡಿಸಿ ಸಮನ್ಸ್ ಜಾರಿಗೊಳಿಸಲಿದೆ.





















































 
 

ತಮ್ಮ ಬೆಂಗಳೂರಿನ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮಾಜಿ ಸಿಎಂ ಬಿಎಸ್‌ವೈ ಅವರು 17 ವರ್ಷದ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಮಾರ್ಚ್ ನಲ್ಲಿ ಆರೋಪ ಕೇಳಿ ಬಂದಿತ್ತು. ಬಾಲಕಿಯ ತಾಯಿಯ ಆರೋಪದ ಬಳಿಕ ಸದಾಶಿವನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

error: Content is protected !!
Scroll to Top