ಬೆಂಗಳೂರು: ನವದೆಹಲಿ ಕೆಂಪುಕೋಟೆಯ ಸಮೀಪ ನಡೆದ ಬಾಂಬ್ ಬ್ಲಾಸ್ಟ್ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾಕೆ ಈ ವರೆಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ.
ಉಗ್ರರು ದಾಳಿ ಮಾಡಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆಗಳಿಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಸತ್, ಸೇನಾಭವನ, ಪ್ರಮುಖ ಸ್ಥಳಗಳು ಉಗ್ರರ ಟಾರ್ಗೆಟ್ ಲಿಸ್ಟ್‌ನಲ್ಲಿ ಇತ್ತು ಎಂಬ ಮಾಹಿತಿ ಹೊರಬಂದಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಎಲ್ಲರೂ ಒಂದಾಗಬೇಕಿದೆ. ಭಾರತೀಯ ಎಂಬ ಮನೋಭಾವವದಿಂದ ಎಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕಿತ್ತು. ಆದರೆ ಕಾಂಗ್ರೆಸ್ ನಾಯಕರು ಮನಬಂದಂತೆ ಮಾತಾಡುತ್ತಿದ್ದಾರೆ. ಘಟನೆಯನ್ನ ಬಿಹಾರ್ ಚುನಾವಣೆಗೆ ಲಿಂಕ್ ಮಾಡಲಾಗುತ್ತಿದೆ. ಇದು ಮೂರ್ಖತನದ ಪರಮಾವಧಿ. ದೇಶದ್ರೋಹದ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
























