ಕಂಟೇನರ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತ
ಪುಣೆ : ಮಹಾರಾಷ್ಟ್ರದ ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆ ಬಳಿ ಗುರುವಾರ ರಾತ್ರಿ ಕಂಟೇನರ್ ಟ್ರಕ್ ನಿಯಂತ್ರಣ ತಪ್ಪಿ ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಸಖ್ಯೆ 8ಕ್ಕೇರಿದೆ. ಎರಡು ಕಂಟೇನರ್ಗಳ ನಡುವೆ ವಾಹನಗಳು ಸಿಲುಕಿಕೊಂಡ ಪರಿಣಾಮ 2ರಿಂದ 3 ಭಾರೀ ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅನೇಕ ಮಂದಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿದ್ದು, ಆರು ಮಂದಿ ಸ್ಥಳದಲ್ಲೇ ಜೀವಂತ ದಹನವಾಗಿದ್ದರು.
ಎರಡು ಟ್ರಕ್ಗಳು ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ. ಆ ಎರಡು ವಾಹನಗಳು ಬೆಂಕಿಗೆ ಆಹುತಿಯಾಗುವ ಮೊದಲು ಕಾರು ಅವುಗಳ ನಡುವೆ ಸಿಲುಕಿಕೊಂಡಿತು. ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಹಲವಾರು ಗಂಟೆಗಳ ಪ್ರಯತ್ನದ ನಂತರ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಟ್ರಕ್ ಡಿಕ್ಕಿ ಹೊಡೆದ ಬೆನ್ನಲ್ಲೇ 2-3 ಭಾರೀ ವಾಹನಗಳು ಬೆಂಕಿಗೆ ಆಹುತಿಯಾಗಿವೆ ಎಂದು ವಲಯ 3 ಪುಣೆ ನಗರ ಪೊಲೀಸ್ ಡಿಸಿಪಿ ಸಂಭಾಜಿ ಕದಮ್ ತಿಳಿಸಿದ್ದಾರೆ.
ಅಪಘಾತದಲ್ಲಿ 20 ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಹೇಗೆ ಸಂಭವಿಸಿತು ಎಂದು ನಾವು ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಗ್ನಿಶಾಮಕ ದಳವು ನೀರಿನ ಟ್ಯಾಂಕರ್ಗಳ ಮೂಲಕ ಬೆಂಕಿಯನ್ನು ನಂದಿಸುವ ಕಾರ್ಯ ನಡೆಸಿವೆ. ಅಪಘಾತದಿಂದಾಗಿ ಜನನಿಬಿಡ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.
























