ಮಂಗಳೂರು: ಮಹಿಳೆಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿ 1.81 ಕೋ. ರೂ. ದೋಚಿದ ಖದೀಮರು

ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ ಎಂದು ಬೆದರಿಸಿ ಡಿಜಿಟಲ್‌ ಅರೆಸ್ಟ್‌

ಮಂಗಳೂರು: ಮಹಿಳೆಯೊಬ್ಬರನ್ನು ಡಿಜಿಟಲ್ ಅರೆಸ್ಟ್ ಮಾಡಿ 1,81,50,000ರೂ. ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆದೆ. ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಮಹಿಳೆಯೊಬ್ಬರ ಮೊಬೈಲ್‌ಗೆ ಅ.24ರಂದು ಅಪರಿಚಿತ ವ್ಯಕ್ತಿ ಕರೆ ಮಾಡಿದ್ದು, ಮುಂಬೈನ ಕೊಲಾಬ ಪೊಲೀಸ್ ಠಾಣೆಯಿಂದ ಕರೆ ಮಾಡುತ್ತಿರುವುದಾಗಿ ಮಹಿಳೆಯನ್ನು ನಂಬಿಸಿ ಆಕೆಯ ವಿರುದ್ಧ ಅಕ್ರಮ ಹಣ ವರ್ಗಾವಣೆ ಹಾಗೂ ಮಾನವ ಕಳ್ಳ ಸಾಗಾಣಿಕೆ ಮಾಡಿ ಕಮಿಷನ್ ತೆಗೆದುಕೊಂಡ ಆರೋಪವಿದೆ ಎಂದು ಹೇಳಿದ್ದಾನೆ. ಇದರಿಂದ ಭಯಭೀತರಾದ ಮಹಿಳೆಗೆ ವಿಡಿಯೋ ಕಾಲ್ ಮಾಡಿ ಲೆಟರ್ ಬರೆಸಿಕೊಂಡು ವಾಟ್ಸಪ್ ನಂಬರ್‌ವೊಂದಕ್ಕೆ ಕಳುಹಿಸಿಕೊಡುವಂತೆ ತಿಳಿಸಿದ್ದಾರೆ.





















































 
 

ವಿನೋದ್ ರಾಥೋಡ್ ಹಾಗೂ ರಾಜೇಶ್ ಮಿಶ್ರಾ ಎಂಬ ಅಪರಿಚಿತ ವ್ಯಕ್ತಿಗಳು ಪೊಲೀಸ್ ಅಧಿಕಾರಿಗಳೆಂದು ಪರಿಚಯಿಸಿ ವಾಟ್ಸಪ್ ವಿಡಿಯೋ ಕರೆ ಮಾಡಿ ಬ್ಯಾಂಕ್ ಖಾತೆಗಳ ಪರಿಶೀಲನೆ ಮಾಡಬೇಕು ಎಂದು ತಿಳಿಸಿದ್ದಾರೆ. ಇದಾದ ಬಳಿಕ ನಮ್ಮಲ್ಲಿ ಹಣವನ್ನು ನೀಡಿದರೆ, ಪ್ರಕರಣ ಇತ್ಯರ್ಥವಾದ ಬಳಿಕ ವಾಪಾಸ್ ನೀಡುತ್ತೇವೆ ಎಂದು ನಂಬಿಸಿದ್ದಾರೆ. ಇದನ್ನು ನಂಬಿದ ಮಹಿಳೆ ಅ.28ರಿಂದ ನ.11ರವರೆಗೆ ಹಂತಹಂತವಾಗಿ 1,81,50,000ರೂ. ಆರ್‌ಟಿಜಿಎಸ್ ಮೂಲಕ ಹಣ ವರ್ಗಾಯಿಸಿದ್ದಾರೆ. ಆದರೆ ಅನಂತರ ಅವರು ಹಣ ಹಿಂದಿರುಗಿಸದೆ ಮೊಬೈಲ್‌ ಸ್ವಿಚ್‌ಆಫ್‌ ಮಾಡಿದಾಗ ಮಹಿಳೆಗೆ ತಾನು ಮೋಸ ಹೋಗಿರುವುದು ಅರಿವಾಗಿದೆ. ವಂಚನೆಗೊಳಗಾದ ಮಹಿಳೆ ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

error: Content is protected !!
Scroll to Top