ದ.ಕ ಜಿಲ್ಲೆಯಲ್ಲಿ ಒಂದೇ ದಿನ ಎರಡು ಭೀಕರ ಅಪಘಾತ
ಮಂಗಳೂರು: ಪಣಂಬೂರು ಸಿಗ್ನಲ್ ನಲ್ಲಿ ಬಳಿ ನಿಂತಿದ್ದ ವಾಹನೆಗಳಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟ ಭೀಕರ ಅಪಘಾತ ಶನಿವಾರ ಸಂಭವಿಸಿದೆ.
ಪಣಂಬೂರು ಸಿಗ್ನಲ್ ಬಳಿ ವಾಹನಗಳು ಸಿಗ್ನಲ್ ಗಾಗಿ ಕಾಯುತ್ತಿದ್ದ ವೇಳೆ ವೇಗವಾಗಿ ಬಂದ ಟ್ಯಾಂಕರ್ ಹಿಂದ್ಗಡೆಯಿಂದ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.
ಮುಂಭಾಗದಲ್ಲಿ ಟ್ಯಾಂಕರ್ ನಿಂತಿದ್ದು, ಅದರ ಹಿಂಭಾಗದಲ್ಲಿ, ಕಾರು, ಆಟೊ ರಿಕ್ಷಾ ನಿಂತಿತ್ತು.
ಹಿಂದಿನಿಂದ ವೇಗವಾಗಿ ಬಂದ ಟ್ಯಾಂಕರ್ ಆಟೋ ರಿಕ್ಷಾಕ್ಕೆ ಡಿಕ್ಕಿಯಾಗಿ ರಿಕ್ಷಾ ಎದುರಿನಲ್ಲಿ ನಿಂತಿದ್ದ ಕಾರಿಗೆ ಅಪ್ಪಳಿಸಿ ಬಳಿಕ ಮುಂದೆ ನಿಂತಿದ್ದ ಮತ್ತೊಂದು ಟ್ಯಾಂಕರ್ ಗೆ ಅಪ್ಪಳಿಸಿದೆ ಎನ್ನಲಾಗಿದೆ.
ಘಟನೆಯಿಂದ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇನ್ನೊಂದು ಅಪಘಾತ: ಮೂರು ಸಾವು
ಬಿ.ಸಿ.ರೋಡ್ ಬಳಿಯು ಇನೋವಾ ಕಾರು ಸರ್ಕಲ್ ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.
























