ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಭಜನೋತ್ಸವ ಕಾರ್ಯಕ್ರಮದ ಪೂರ್ವ ತಯಾರಿ ಸಮಾಲೋಚನಾ ಸಭೆ

ಅಳಿಕೆ ವಲಯ ಮಟ್ಟದ ಭಜನೋತ್ಸವ ಸಮಿತಿ ಅಧ್ಯಕ್ಷರಾಗಿ ಮಾರಪ್ಪ ಶೆಟ್ಟಿ ಬೈಲುಗುತ್ತು ಆಯ್ಕೆ

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ, ಅಳಿಕೆ ವಲಯದ ಭಜನೋತ್ಸವ ಕಾರ್ಯಕ್ರಮದ ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ ನಡೆಯಿತು.

ಡಿ. 21 ಆದಿತ್ಯವಾರದಂದು ನಡೆಯುವ ವಲಯಮಟ್ಟದ ಭಜನೋತ್ಸವ ಕಾರ್ಯಕ್ರಮದ ಪೂರ್ವತಯಾರಿ ಸಭೆಯನ್ನು ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆಸಲಾಯಿತು.





















































 
 

ಸಭೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಆಡಳಿತ ಅಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು ಅವರನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ, ವಿವಿಧ ಭಜನಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಪಾಲ್ತಾಜೆ, ಕೋಶಾಧಿಕಾರಿ ಜಯರಾಮ್ ರೈ ಕಲ್ಲಡ್ಕ, ವಲಯದ್ಯಕ್ಷ ರಾಜೇಂದ್ರ ರೈ,ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು, ವಲಯ ಮೇಲ್ವಿಚಾರಕರು, ಭಜನಾ ಪರಿಷತ್ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು, ವಲಯದ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಮೀನಾಕ್ಷಿ ಸ್ವಾಗತಿಸಿ, ಸೇವಾಪ್ರತಿನಿಧಿ ಕಾವ್ಯ ವಂದಿಸಿದರು.

error: Content is protected !!
Scroll to Top