ಪುತ್ತೂರು: ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ನಡೆಯುತ್ತಿರುವ, 1965ರಲ್ಲಿ ಸ್ಥಾಪನೆಗೊಂಡ, ವಿವೇಕಾನಂದ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀಧರ್ ನಾಯ್ಕ್ ಅಸ್ತಂಗತರಾಗಿದ್ದಾರೆ.
ಇತಿಹಾಸ ವಿಭಾಗದ ಪ್ರಾಧ್ಯಾಪಕರಾಗಿ, ವಸತಿ ನಿಲಯದ ಮೇಲ್ವಿಚಾರಕರಾಗಿ, ರಾಷ್ಟ್ರೀಯ ಸೇವಾ ಯೋಜನೆಯ ಅಧಿಕಾರಿಯಾಗಿ ಕಾಲೇಜಿನ ಅಭಿವೃದ್ಧಿಗೆ ಅನನ್ಯ ಸೇವೆ ಸಲ್ಲಿಸಿದ್ದರು .
ಆಡಳಿತ ಮಂಡಳಿಯ ಅಧ್ಯಕ್ಷ ಕಲ್ಲಡ್ಕ ಪ್ರಭಾಕರ ಭಟ್, ಉಪನ್ಯಾಸಕ ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಮತ್ತು ಹಿತೈಷಿಗಳು ಕಂಬನಿ ಮಿಡಿದಿದ್ದಾರೆ.
























