ಬೆಂಗಳೂರು ಮೆಟ್ರೋ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ

ಇಷ್ಟಕ್ಕೂ ಬೆದರಿಕೆ ಹಾಕಿದ ವ್ಯಕ್ತಿಯ ಬೇಡಿಕೆ ಏನು ಗೊತ್ತೆ?

ಬೆಂಗಳೂರು : ಬೆಂಗಳೂರಿನ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬಂದಿರುವ ಬೆದರಿಕೆ ಇ-ಮೇಲ್‌ ಒಂದು ಬಿಎಂಆರ್‌ಸಿಎಲ್‌ನಲ್ಲಿ ಆತಂಕ ಸೃಷ್ಟಿಸಿದೆ. ನವೆಂಬರ್ 14ರ ರಾತ್ರಿ ಸುಮಾರು 11.30ಕ್ಕೆ ಬಿಎಂಆರ್‌ಸಿಎಲ್ ಅಧಿಕೃತ ಇ-ಮೇಲ್‌ಗೆ ಅಪರಿಚಿತ ವ್ಯಕ್ತಿಯೊಬ್ಬ ಬೆದರಿಕೆಯ ಸಂದೇಶ ಕಳುಹಿಸಿದ್ದ. ವ್ಯಕ್ತಿ ತಾನು ಕಳಿಸಿದ ಇ-ಮೇಲ್​ನಲ್ಲಿ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡಿದರೆ ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡುತ್ತೇನೆಂದು ಬರೆದಿದ್ದಾನೆ.

ಇ-ಮೇಲ್‌ನಲ್ಲಿ ಮೆಟ್ರೋ ಸಿಬ್ಬಂದಿಯಾದ ತನ್ನ ವಿಚ್ಛೇದಿತ ಪತ್ನಿಗೆ ಡ್ಯೂಟಿ ನಂತರ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ, ನಿಮ್ಮ ಒಂದು ಮೆಟ್ರೋ ನಿಲ್ದಾಣ ಬ್ಲಾಸ್ಟ್ ಮಾಡಬೇಕಾಗುತ್ತದೆ. ನಾನು ಉಗ್ರಗಾಮಿಯಂತೆ, ಅದರಲ್ಲೂ ಕನ್ನಡಿಗರ ವಿರುದ್ಧ ಎಂದು ಬೆದರಿಕೆ ಹಾಕಲಾಗಿದೆ. ಮೇಲ್ ಪರಿಶೀಲಿಸಿದ ಬಳಿಕ ಬಿಎಂಆರ್‌ಸಿಎಲ್ ಅಧಿಕಾರಿ ತಕ್ಷಣವೇ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.





















































 
 
error: Content is protected !!
Scroll to Top