ಕಡಬ: ಲೋಕಾಯುಕ್ತ ಜನಸಂಪರ್ಕ ಸಭೆ ನವೆಂಬರ್ 28ರಂದು ಬೆಳಿಗ್ಗೆ 11 ಗಂಟೆಯಿಂದ ಕಡಬ ತಾಲೂಕು ಕಚೇರಿಯಲ್ಲಿ ನಡೆಯಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ನವೆಂಬರ್ 28ರಂದು ರಂದು ಕಡಬ ತಾಲೂಕು ಕಚೇರಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನೀಡಬಹುದು.
ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದು. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: ಪೊಲೀಸ್ ಅಧೀಕ್ಷಕರ ಕಚೇರಿ 0824 – 2950997, 9364062517, ಪೊಲೀಸ್ ಉಪಾಧೀಕ್ಷಕರ ಕಚೇರಿ 1-0824 – 2453420, 9364062579, ಪೊಲೀಸ್ ಉಪಾಧೀಕ್ಷಕರ ಕಚೇರಿ 2- 0824 2453420, 9364062580, ಪೊಲೀಸ್ ನಿರೀಕ್ಷಕರ ಕಚೇರಿ- 0824 – 2427237, 9364062691, 9364062692, 9364062693.
ಅರ್ಜಿದಾರರು ನಮೂನೆ I & II ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001ರವರಿಗೆ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
























