ಪತ್ನಿಯ ಆರೋಗ್ಯ ವಿಚಾರಿಸಲು ವಿಮಾನ ನಿಲ್ದಾಣದಿಂದ ಅಸ್ಪತ್ರೆಗೆ ದೌಡಾಯಿಸಿದ ಸಿದ್ದರಾಮಯ್ಯ

ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಮ್ಮ ಅವರನ್ನು ಶ್ವಾಸಕೋಶದ ಸಮಸ್ಯೆಯಿಂದಾಗಿ ಬೆಂಗಳೂರಿನ ಶೇಷಾದ್ರಿಪುರಂ‌‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಐಸಿಯುನಲ್ಲಿ ಡಾ.ಬಿ.ಸಿ. ಶ್ರೀನಿವಾಸ್ ನೇತೃತ್ವದ ವೈದ್ಯರ ಚಿಕಿತ್ಸೆ ನೀಡುತ್ತಿದೆ. ಸಿದ್ದರಾಮಯ್ಯ ಇಂದು ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ಬಂದಿಳಿದ ಕೂಡಲೇ ಆಸ್ಪತ್ರೆಗೆ ದೌಡಾಯಿಸಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಭೇಟಿ, ಸಂಪುಟ ವಿಸ್ತರಣೆ ಸಂಬಂಧ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದರು. ಇಂದು ಮುಂಜಾನೆ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ವಿಮಾನ ನಿಲ್ದಾಣದಿಂದ ನೇರವಾಗಿ ಶೇಷಾದ್ರಿಪುರಂನಲ್ಲಿರುವ ಆಸ್ಪತ್ರೆಗೆ ಧಾವಿಸಿ ಐಸಿಯುನಲ್ಲಿರುವ ಪತ್ನಿಯ ಆರೋಗ್ಯ ವಿಚಾರಿಸಿದರು. ನಂತರ ಅರ್ಧಗಂಟೆಗೂ ಹೆಚ್ಚು ಕಾಲ ವೈದ್ಯರ ಜೊತೆ ಸಮಲೋಚನೆ ನಡೆಸಿದರು.





















































 
 

ಬಳಿಕ ಮಾತನಾಡಿದ ಸಿಎಂ, ಆರೋಗ್ಯ ಸ್ಥಿರವಾಗಿದ್ದು ಏನೂ ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ, ಈಗ ಸುಧಾರಣೆ ಕಾಣುತ್ತಿದೆ. ಇನ್ನೂ 2-3 ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಹೇಳಿ ತೆರಳಿದರು.

ತಾಯಿಯ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಪುತ್ರ ಯತೀಂದ್ರ, ಶ್ವಾಸಕೋಶದಲ್ಲಿ ನೀರು ತುಂಬಿದೆ. ಹಾಗಾಗಿ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಇದರಿಂದ ವೈದ್ಯರು ಸಾಕಷ್ಟು ಪರೀಕ್ಷೆ ಮಾಡಿ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

error: Content is protected !!
Scroll to Top