ಸುಳ್ಯ: ಜ್ಯೂಸ್ ಬಾಟಲಿಗಳನ್ನು ತುಂಬಿಕೊಂಡು ಮಡಿಕೇರಿ ಕಡೆಯಿಂದ ಬರುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಘಟನೆ ದೇವರಕೊಲ್ಲಿ ಫಾಲ್ಸ್ ಸಮೀಪ ನಡೆದಿದೆ.
ಘಟನೆಯಲ್ಲಿ ಲಾರಿಗೆ ಬೆಂಕಿ ಹತ್ತಿಕೊಂಡಿದ್ದು, ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರಾಗಿದ್ದಾನೆ.
























