ತಂದೆ-ತಾಯಿ ಕಣ್ಣೆದುರೆ 5 ವರ್ಷದ ಬಾಲಕಿಯನ್ನು ಹೊತ್ತೊಯ್ದು ಸಾಯಿಸಿದ ಚಿರತೆ

ಚಿಕ್ಕಮಗಳೂರು : ತಂದೆ-ತಾಯಿಯ ಕಣ್ಣೆದುರೇ ಐದು ವರ್ಷ ಪ್ರಾಯದ ಬಾಲಕಿಯನ್ನು ಚಿರತೆ ಕೊಂಡೊಯ್ದು ಸಾಯಿಸಿದ ದಾರುಣ ಘಟನೆ ಕಡೂರು ತಾಲೂಕಿನ ನವಿಲೇಕಲ್ ಗುಡ್ಡದಲ್ಲಿ ಸಂಭವಿಸಿದೆ. ಚಿರತೆ ದಾಳಿಯಿಂದ ಸಾವನ್ನಪ್ಪಿದ ಬಾಲಕಿಯನ್ನು ಸಾನ್ವಿ (5) ಎಂದು ಗುರುತಿಸಲಾಗಿದೆ.

ಮನೆಯ ಹಿಂದೆ ಕೊಟ್ಟಿಗೆಯಲ್ಲಿದ್ದ ಮಗುವಿನ ಮೇಲೆ ಚಿರತೆ ದಾಳಿ ಮಾಡಿದೆ. ಈ ವೇಳೆ ಮಗು ಚೀರಾಟ ಕೇಳಿ ತಂದೆ ತಾಯಿ ಬಂದಿದ್ದಾರೆ. ಅವರ ಎದರುರಲ್ಲೇ ಚಿರತೆ ಮಗುವನ್ನು ಕಾಡಿಗೆ ಹೊತ್ತೊಯ್ದಿದೆ. ಬಳಿಕ ಸ್ಥಳಿಯರು ಹುಡುಕಾಡಿದಾಗ ಕಾಡಂಚಿನಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ. ಬೀರೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಚಿರತೆ ಹಾವಳಿಯಿಂದ ಹೊಲ, ಗದ್ದೆ, ತೋಟಗಳಿಗೆ ಕೆಲಸಕ್ಕೆ ಹೋಗುವ ಕೂಲಿ ಕಾರ್ಮಿಕರು, ಶಾಲಾ ಕಾಲೇಜಿಗೆ ಹೋಗುವ ಮಕ್ಕಳು ಆತಂಕದಲ್ಲಿ ಓಡಾಡುವ ಸ್ಥಿತಿ ಎದುರಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಚಿರತೆಯನ್ನು ಸೆರೆ ಹಿಡಿಯಬೇಕು. ಮಗುವಿನ ಸಾವಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.





















































 
 
error: Content is protected !!
Scroll to Top