ಬೆಳ್ತಂಗಡಿ: ಮದ್ದಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವ್ಯಕ್ತಿ ಬಂಗಾಡಿ ನಿವಾಸಿ ಎಂದು ತಿಳಿದು ಬಂದಿದೆ.
ಕಾಮಗಾರಿ ನಡೆಯುತ್ತಿರುವ ಪ್ರದೇಶದಲ್ಲಿ ವೃದ್ಧ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಮಗಾರಿಯ ಯಂತ್ರವೊಂದನ್ನು ಚಲಾಯಿಸುತ್ತಾ ಬಂದ ಚಾಲಕ ವೃದ್ಧನನ್ನು ಗಮನಿಸದೆ ವಾಹನ ಚಲಾಯಿಸಿದ್ದು ವೃದ್ಧ ವಾಹನದ ಅಡಿಗೆ ಸಿಲುಕಿಕೊಂಡು ಮೃತಪಟ್ಟಿದ್ದಾರೆ.
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
























