ಸಂಸ್ಕೃತವನ್ನು ಸತ್ತ ಭಾಷೆ ಎಂದು ಹೇಳಿ ವಿವಾದ ಎಬ್ಬಿಸಿದ ಉದಯನಿಧಿ ಸ್ಟಾಲಿನ್

ಚೆನ್ನೈ: ತಮಿಳುನಾಡಿನ ಉಪಮುಖ್ಯಮಂತ್ರಿ ಉದಯನಿಧಿ ‌ಸ್ಟಾಲಿನ್ ಸದ್ಯ ಮತ್ತೊಂದು ವಿವಾದವನ್ನು ಮೈಮೇಲೆಳೆದುಕೊಂಡಿದ್ದಾರೆ.

ಪ್ರಧಾನಿ ಮೋದಿ ಅವರು ತಮಿಳು ಭಾಷೆಯನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆಪಾದಿಸಿರುವ ಅವರು, ಸಂಸ್ಕೃತವನ್ನು ಸತ್ತ ಭಾಷೆ ಎನ್ನುವ ಮೂಲಕ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಸಂಸ್ಕೃತವನ್ನು ಉತ್ತೇಜಿಸಲು ಪ್ರಧಾನಿ ಮೋದಿ ತಮಿಳನ್ನು ಬದಿಗಿಟ್ಟಿದ್ದಾರೆ. ನೀವು ತಮಿಳು ಕಲಿಯಲು ಉತ್ಸುಕರಾಗಿದ್ದರೆ, ನೀವು ಮಕ್ಕಳಿಗೆ ಹಿಂದಿ ಮತ್ತು ಸಂಸ್ಕೃತವನ್ನು ಏಕೆ ಕಲಿಸುತ್ತಿದ್ದೀರಿ?” ಎಂದು ಪ್ರಧಾನಿ ಮೋದಿಯವರನ್ನು ಪ್ರಶ್ನೆ ಮಾಡಿದ್ದಾರೆ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ತಮಿಳು ಭಾಷೆ ಅಭಿವೃದ್ಧಿಗೆ ಕೇವಲ 150 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಆದರೆ, ಸತ್ತ ಸಂಸ್ಕೃತ ಭಾಷೆಗೆ 2,400 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ ಎಂದು ಆರೋಪಿಸಿದ್ದಾರೆ.





















































 
 

ಉದಯನಿಧಿ ಸ್ಟಾಲಿನ್ ಹೇಳಿಕೆಯ ವಿರುದ್ಧ ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವುದೇ ಭಾಷೆಯನ್ನು ಅಗೌರವದಿಂದ ನೋಡುವ ಅಧಿಕಾರ ಯಾರಿಗೂ ಇಲ್ಲ. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಸ್ಥಾನ ಮಾನ ಇರುತ್ತದೆ. ಅದೂ ಅಲ್ಲದೆ ದೇಶದಲ್ಲಿರುವ ಎಲ್ಲಾ ದೇವಸ್ಥಾನಗಳಲ್ಲಿ ಇಂದಿಗೂ ಸಂಸ್ಕೃತದಲ್ಲೇ ಶ್ಲೋಕ ಹಾಗೂ ಪ್ರಾರ್ಥನೆಗಳನ್ನು ಹೇಳಲಾಗುತ್ತಿದೆ. ಸಂಸ್ಕೃತ ಭಾಷೆಗೆ ಸನಾತನ ಧರ್ಮದಲ್ಲಿ ಮಹತ್ವದ ಸ್ಥಾನ ಇದೆ. ಅಲ್ಲದೆ ಒಂದು ಭಾಷೆಯನ್ನು ಹೊಗಳುವ ಭರದಲ್ಲಿ ಇನ್ನೊಂದು ಭಾಷೆಯನ್ನು ತೆಗಳ ಬಾರದು ಎಂದು ತಿರುಗೇಟು ನೀಡಿದ್ದಾರೆ.

error: Content is protected !!
Scroll to Top