ಬೆಂಗಳೂರು: ಬಿಬಿಎಂ ವಿದ್ಯಾರ್ಥಿನಿಯನ್ನು ಆಕೆಯ ಸ್ನೇಹಿತನೇ ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ತಮ್ಮೇನಹಳ್ಳಿಯಲ್ಲಿ ನಡೆದಿದೆ.
ಕೊಲೆಯಾದ ವಿದ್ಯಾರ್ಥಿನಿಯನ್ನು ಆಂಧ್ರ ಮೂಲದ ದೇವಿಶ್ರೀ (21) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪ್ರೇಮ್‌ವರ್ಧನ್ ಎಂದು ಗುರುತಿಸಲಾಗಿದೆ.
ದೇವಿಶ್ರೀಯು ಪ್ರೇಮ್‌ಶೇಖರ್ ಜೊತೆಗೆ ಮತ್ತೊಬ್ಬ ಯುವತಿಯ ರೂಂಗೆ ತೆರಳಿದ್ದಳು. ಆದರೆ ರಾತ್ರಿಯಾದರೂ ಆಕೆ ಅಲ್ಲಿಂದ ಬಂದಿಲ್ಲ. ಇದರಿಂದ ಆತಂಕಗೊಂಡ ಕುಟುಂಬ ವರ್ಗ ಮತ್ತು ಆಕೆಯ ರೂಂಮೇಟ್ಸ್ ಮಾಹಿತಿ ನೀಡಿದ ನಂತರ ಪ್ರಕರಣ ದಾಖಲು ಮಾಡಲಾಗಿದೆ.
ಈ ಬಗ್ಗೆ ಪೊಲೀಸರು ಪರಿಶೀಲನೆ ಮಾಡಿದ್ದು, ಆ ವೇಳೆ ಆಕೆ ಹೋಗಿದ್ದ ರೂಮ್‌ನಲ್ಲೇ ಆಕೆಯನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಬಳಿಕ ಆರೋಪಿ ಪ್ರೇಮ್‌ವರ್ಧನ್ ಅಲ್ಲಿಂದ ಪರಾರಿಯಾಗಿದ್ದಾನೆ. ಕೊಲೆಗೆ ಕಾರಣವೇನು ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
























