ಮುಂಬೈ: ಬಾಲಿವುಡ್‌ನ ಹಿರಿಯ ನಟ ಎವರ್‌ಗ್ರೀನ್ ಸ್ಟಾರ್, ಆ್ಯಕ್ಷನ್ ಕಿಂಗ್ ಎಂದೇ ಖ್ಯಾತಿ ಪಡೆದಿದ್ದ ಧರ್ಮೇಂದ್ರ ಅವರು ಇಂದು ನಿಧನರಾಗಿದ್ದಾರೆ.
ಅವರಿಗೆ 89 ವರ್ಷವಾಗಿತ್ತು. ಕೆಲ ಸಮಯದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಕೊಂಚ ಚೇತರಿಸಿಕೊಂಡು ಮನೆಗೆ ತೆರಳಿದ್ದರು.
ಸುಮಾರು 300 ಕ್ಕೂ ಅಧಿಕ ಚಿತ್ರಗಳಲ್ಲಿ ಅವರು ಅಭಿನಯಿಸಿ ಪ್ರೇಕ್ಷಕರನ್ನು ರಂಜಿಸಿದ್ದರು. ಅವರ ನಿಧನಕ್ಕೆ ಹಲವಾರು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
























