ಕಡಬ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರ ಮಾರ್ಗದರ್ಶನದಲ್ಲಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಶಾಂತಿಮೊಗರು ಕುದ್ಮಾರಿನಲ್ಲಿ ಇಂದು ವೈಭವದ ಷಷ್ಠಿ ಮಹೋತ್ಸವ ನಡೆದಿದೆ.

ಆ ಪ್ರಯುಕ್ತ ಬೆಳಗ್ಗೆ ದೇವತಾ ಪ್ರಾರ್ಥನೆ, ಮಹಾಗಣಪತಿ ಹೋಮ, ದೇವರಿಗೆ ಕಲಶ ಪೂಜೆ, ಕಲಶಾಭಿಷೇಕ, ಮಹಾ ಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದಿದೆ.
ಶ್ರೀ ಕ್ಷೇತ್ರದಲ್ಲಿ ಷಷ್ಠಿ ಮಹೋತ್ಸವದ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವೂ ನಡೆದಿದೆ.
ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಶ್ರೀ ದೇವರ ದರ್ಶನ ಪಡೆದು ಪುನೀತರಾದರು.
























