ಕಾರುಗಳ ಡಿಕ್ಕಿ : ಒಂದೇ ಕುಟುಂಬದ ಐದು ಮಂದಿ ಸಾವು

ಮಂತ್ರಾಲಯಕ್ಕೆ ಹೊರಟಿದ್ದವರ ಕಾರು ಭೀಕರ ಅಪಘಾತ

ಬೆಂಗಳೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯ ಕೊಟೆಕಲ್‌ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 164ರಲ್ಲಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಕೋಲಾರ ಮೂಲದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಇದರಲ್ಲಿ ಇಬ್ಬರು ಪುಟ್ಟ ಮಕ್ಕಳೂ ಇದ್ದಾರೆ. ಮತ್ತೊಂದು ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.





















































 
 

ಕುಟುಂಬಸ್ಥರು ಒಂದೇ ಕಾರಿನಲ್ಲಿ ಮಂತ್ರಾಲಯಕ್ಕೆ ಹೊರಟಿದ್ದ ವೇಳೆ ಎಮ್ಮಿಗನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸ್ವಿಫ್ಟ್ ಡಿಜೈರ್‌ನಲ್ಲಿದ್ದ ಐವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಫಾರ್ಚೂನರ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರಲ್ಲಿ ಮೂವರು ವಯಸ್ಕರು ಮತ್ತು ಇಬ್ಬರು ಮಕ್ಕಳು ಎಂದು ಹೇಳಲಾಗಿದೆ. ಅಡೋನಿ ಕಡೆಗೆ ಪ್ರಯಾಣಿಸುತ್ತಿದ್ದ ಫಾರ್ಚೂನರ್ ಅತಿ ವೇಗದಲ್ಲಿ ಚಲಿಸುತ್ತಿದ್ದ ಕಾರಣ, ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

error: Content is protected !!
Scroll to Top