ಉಪ್ಪಿನಂಗಡಿ : ಪಲ್ಟಿಯಾಗಿ ಬಸ್ಸಿಗೆ ಡಿಕ್ಕಿ ಹೊಡೆದ ಟೆಂಪೊ

ಉಪ್ಪಿನಂಗಡಿ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ಪರಿಸರದ ಕೆಂಪುಹೊಳೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಸರಕು ಸಾಗಿಸುತ್ತಿದ್ದ ಟೆಂಪೊ ಪಲ್ಟಿಯಾಗಿ, ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ನಡೆದಿದೆ.

ಈ ಅಪಘಾತದಲ್ಲಿ ಟೆಂಪೊ ಚಾಲಕ ಗಾಯಗೊಂಡಿದ್ದು, ಘಟನೆಯಲ್ಲಿ ಬಸ್ಸಿನ ಮುಂಭಾಗ ಜಖಂಗೊಂಡಿದೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.





















































 
 
error: Content is protected !!
Scroll to Top