ಸುಬ್ರಹ್ಮಣ್ಯ: ವ್ಯಕ್ತಿಯೋರ್ವ ಅಪ್ರಾಪ್ತ ಹುಡುಗನಿಗೆ ಗದರಿಸಿ, ಕೋಲಿನಿಂದ ಹೊಡೆದಿದ್ದು, ಈ ಘಟನೆ ಬಾಲಕನ ತಾಯಿಯ ಗಮನಕ್ಕೆ ಬಂದ ಕೂಡಲೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಸಂತ್ರಸ್ತ ಬಾಲಕ ಸ್ಥಳೀಯ ಶಾಲೆಯಲ್ಲಿ ಓದುತ್ತಿದ್ದು, ಆರೋಪಿ ಚೇತನ್ ಎಂಬಾತ ಹುಡುಗನಿಗೆ ಕೋಲು ಹಿಡಿದು ಹೊಡೆಯುತ್ತಿರುವ ವಿಡಿಯೋ ಮೊಬೈಲಿನಲ್ಲಿ ವೈರಲ್ ಆಗಿದೆ.
ಈ ಹಿನ್ನೆಲೆ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿರುವುದಾಗಿದೆ.
























