ಮೈಸೂರು: ಮೈಸೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಮೈಸೂರು ವಕೀಲರ ಸಂಘ(ರಿ )ದ ವತಿಯಿಂದ ಕನ್ನಡ ರಾಜ್ಯೋತ್ಸವ ಅರ್ಥಪೂರ್ಣವಾಗಿ ನಡೆಯಿತು.
ಈ ಸಂದರ್ಭದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ದನ್ ಕನ್ನಡ ಗೀತೆಯನ್ನು ಹಾಡುವುದರ ಮೂಲಕ ನೆರೆದವರ ವಿಶೇಷ ಮೆಚ್ಚುಗೆಗೆ ಪಾತ್ರಳಾದಳು.

ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ಉಷಾರಾಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಮರ್ ನಾಥ್, ಮೈಸೂರು ವಕೀಲರ ಸಂಘದ ಅಧ್ಯಕ್ಷ ಲೋಕೇಶ್, ಹಿರಿಯ ಸಮಿತಿ ಸದಸ್ಯ ಶಿವಸ್ವಾಮಿ, ವಕೀಲರ ಸಂಘದ ಪದಾಧಿಕಾರಿಗಳು ಸೇರಿದಂತೆ ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರುಗಳು, ವಕೀಲರು, ನ್ಯಾಯಾಲಯದ ಸಿಬ್ಬಂದಿ ವರ್ಗದವರು, zee ಕನ್ನಡ ಸರಿಗಮಪ ಖ್ಯಾತಿಯ ಕಲಾವಿದ ಪುರುಷೋತ್ತಮ್ ಮತ್ತು ತಂಡದವರು ಉಪಸ್ಥಿತರಿದ್ದರು. ಸೋನಿಕಾ ಅವಳು ಮೈಸೂರಿನಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿರುವ ಪುತ್ತೂರಿನ ಜನಾರ್ದನ್ ಮತ್ತು ಪ್ರಮೀಳಾ ದಂಪತಿಗಳ ಪುತ್ರಿ, ಮೈಸೂರಿನ ರೋಟರಿ ಐಡಿಯಲ್ ಜಾವಾ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ 1ನೇ ತರಗತಿಯ ವಿದ್ಯಾರ್ಥಿನಿ.
























