ಪತಿಯ ಅಗಲಿಕೆಯಿಂದ ನೊಂದು ನೇಣಿಗೆ ಶರಣಾದ ಮಹಿಳೆ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಸೌಭಾಗ್ಯ(31) ಎಂದು ಗುರುತಿಸಲಾಗಿದೆ. ಇವರ ಪುಟಾಣಿ ಮಕ್ಕಳಿಬ್ಬರು ಅನಾಥರಾಗಿದ್ದಾರೆ.

ಎರಡು ವರ್ಷದ ಹಿಂದೆ ಇವರು ತಮ್ಮ ಪತಿಯನ್ನು ಕಳೆದುಕೊಂಡಿದ್ದರು. ಆ ಬಳಿಕ ತೀವ್ರ ದುಃಖದಿಂದ ಮಾನಸಿಕ ಖಿನ್ನತೆಗೂ ಒಳಗಾಗಿದ್ದರು ಎಂದು ತಿಳಿದು ಬಂದಿದೆ.





















































 
 

ಸೌಭಾಗ್ಯ ಅವರು ತಮ್ಮ ಕುಟುಂಬದ ನಿರ್ವಹಣೆಗಾಗಿ ದೇವಸ್ಥಾನದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮೊದಲು ಡೆತ್ ನೋಟ್ ಒಂದನ್ನು ಸಹ ಬರೆದಿಟ್ಟಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top