ಪುತ್ತೂರು: ನಗರದ ಪಡೀಲ್ನ ಚಿಕನ್ ಸೆಂಟರೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ನಾಪತ್ತೆಯಾಗಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬದ್ರುದ್ದೀನ್ ಡಿ.ಕೆ (27) ಕಾಣೆಯಾದ ಯುವಕ. ಈತ ಸುಮಾರು 8 ವರ್ಷಗಳಿಂದ ಅಬ್ದುಲ್ ರಹಿಮಾನ್ ಮಾಲಕತ್ವದ ಜಿಂದಗಿ ಚಿಕನ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ನ.29ರಂದು ಎಂದಿನಂತೆ ಬೆಳಗ್ಗೆ 8.45ಕ್ಕೆ ಕೆಲಸಕ್ಕೆ ಹಾಜರಾಗಿದ್ದು, ಬಳಿಕ ಮಾಲಕರಿಗೆ ತಿಳಿಸಿ ಅಂಗಡಿಯಿಂದ ಹೋಗಿದ್ದ ಎನ್ನಲಾಗಿದೆ.
ಆ ಬಳಿಕ ಬದ್ರುದ್ದೀನ್ ಕೆಲಸದ ಸ್ಥಳಕ್ಕೂ ಹೋಗದೆ, ಮನೆಗೂ ಬಾರದೆ ಕಾಣೆಯಾಗಿರುವುದಾಗಿ ದೂರು ನೀಡಲಾಗಿದೆ. ಪುತ್ತೂರು ನಗರ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
























