ನಾರಾಯಣ ಗುರು-ಮಹಾತ್ಮ ಗಾಂಧಿ ಸಂವಾದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟನೆ
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 3ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮಂಗಳೂರಿಗೆ ಆಗಮಿಸಲಿದ್ದಾರೆ.
ಡಿ.3ರಂದು ಬೆಳಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ 11.40ಕ್ಕೆ ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ ಶ್ರೀ ನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ, ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ ಸಮ್ಮೇಳನ ಶತಮಾನೋತ್ಸವ, ಯತಿ ಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 12.30ಕ್ಕೆ ಪೇಸ್, ಜ್ಞಾನ ನಗರ, ಕೊಣಾಜೆ ವತಿಯಿಂದ ಆಯೋಜಿಸಿರುವ ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೇಡ್ ಪಾರ್ಕ್ ಮತ್ತು ಪೇಸ್ ಸ್ಪೋರ್ಟ್ಸ್ ಅರೆನಾ ಇದರ ಶಿಲಾನ್ಯಾಸ ಹಾಗೂ ಪೇಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭ, ಮಧ್ಯಾಹ್ನ 1.15ಕ್ಕೆ ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್‌ನವರ ಭೇಟಿ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಸಭೆ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.
























