ಮಂಗಳೂರು : ಕಾರಿಗೆ ಡಿಕ್ಕಿ ಹೊಡೆದು ಮನೆ ಮೇಲೆ ಉರುಳಿ ಬಿದ್ದ ಕ್ರೇನ್‌

ಮೂಡುಬಿದಿರೆ: ಬೃಹತ್ ಕ್ರೇನ್‌ ಕಾರಿಗೆ ಡಿಕ್ಕಿ ಹೊಡೆದು ಬಳಿಕ ಮನೆ ಮೇಲೆ ಉರುಳಿ ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಮೂಡುಬಿದಿರೆಯ ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮೊರಂತಬೆಟ್ಟು ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ.

ಮೂಲ್ಕಿ- ಮೂಡುಬಿದಿರೆ ರಾಜ್ಯ ಹೆದ್ದಾರಿಯಲ್ಲಿ ಕಲ್ಲಮುಂಡ್ಕೂರಿನ ಮೊರಂತಬೆಟ್ಡುವಿನ ತಿರುವಿನಲ್ಲಿ ಈ ಘಟನೆ ನಡೆದಿದೆ. ಅತಿವೇಗದಲ್ಲಿ ಸಂಚರಿಸುತ್ತಿದ್ದ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದಿದೆ. ಇದರಿಂದ ಮನೆಗೆ ಹಾನಿ ಸಂಭವಿಸಿದೆ.

ಅವಘಡದ ವೇಳೆ ಮನೆಮಂದಿ ಮನೆಯ ಇನ್ನೊಂದು ಪಾರ್ಶ್ವದಲ್ಲಿದ್ದ ಕಾರಣ ಅದೃಷ್ಟವಶಾತ್‌ ಅಪಾಯದಿಂದ ಪಾರಾಗಿದ್ದಾರೆ.





















































 
 
error: Content is protected !!
Scroll to Top