ತಿಮರೋಡಿ ಗಡಿಪಾರಿಗೆ ಮತ್ತೆ ನೋಟಿಸ್‌ ಜಾರಿ?

ಹೊಸ ಪ್ರಕರಣಗಳನ್ನು ಸೇರಿಸಿ ಮತ್ತೆ ಗಡಿಪಾರು ನೋಟಿಸ್‌

ಬೆಳ್ತಂಗಡಿ: ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಮತ್ತೆ ಗಡಿಪಾರು ಮಾಡುವ ಬಗ್ಗೆ ನೋಟಿಸ್ ನೀಡಿರುವುದಾಗಿ ತಿಳಿದು ಬಂದಿದೆ. ಈ ವಿಚಾರ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನೆಯಿಂದ ಬಹಳ ವೈರಲ್‌ ಆಗುತ್ತಿದೆ.

ಈ ಹಿಂದೆ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಆದೇಶ ಮಾಡಿದ್ದರು ಈ ಆದೇಶವನ್ನು ಪ್ರಶ್ನಸಿ ಮಹೇಶ್ ಶೆಟ್ಟಿ ತಿಮರೋಡಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಗಡಿಪಾರು ಆದೇಶವನ್ನು ರದ್ದುಪಡಿಸಿ ಆದೇಶ ನೀಡಿತ್ತು ಹಾಗೂ ಅವರನ್ನು ಗಡಿಪಾರು ಮಾಡಬೇಕಾದರೆ ಮತ್ತೆ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿತ್ತು.





















































 
 

ಅದರಂತೆ ಇದೀಗ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡುವ ಬಗ್ಗೆ ಪುತ್ತೂರು ವಸಹಾಯಕ ಕಮಿಷನರ್ ಅವರ ನ್ಯಾಯಾಲಯ ಮತ್ತೆ ನೋಟೀಸ್ ನೀಡಿದೆ. ಲಭ್ಯ ಮಾಹಿತಿಯಂತೆ ಮಹೇಶ್ ಶೆಟ್ಟಿ ಅವರಿಗೆ ಡಿ.8 ರಂದು ಪುತ್ತೂರು ಎಸಿ ಮುಂದೆ ಹಾಜರಾಗಲು ನೋಟಿಸ್ ಜಾರಿ ಮಾಡಿದೆ.
ಈಗ ಹೊಸದಾಗಿ ದಾಖಲಾಗಿರುವ ಪ್ರಕರಣಗಳನ್ನು ಸೇರಿಸಿ ನೋಟೀಸ್ ನೀಡಲಾಗಿರುವುದಾಗಿ ಮಾಹಿತಿ ಲಭ್ಯವಾಗಿದೆ. ಈದರೊಂದಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ವಿಚಾರ ಮತ್ತೆ ಮುನ್ನೆಲೆಗೆ ಬಂದಂತಾಗಿದೆ.

error: Content is protected !!
Scroll to Top