ಡಿ. 13: ದ.ಕ.ಜಿ.ಪಂ.ಉನ್ನತೀಕರಿಸಿದ ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ

ಕಡಬ: ದ.ಕ.ಜಿ.ಪಂ.ಉ.ಹಿ.ಪ್ರಾ. ಶಾಲೆ ಕುದ್ಮಾರು ಮತ್ತು ಹಿರಿಯ ವಿದ್ಯಾರ್ಥಿಗಳ ಸಂಘದ ಜಂಟಿ ವಾರ್ಷಿಕೋತ್ಸವ ಸಮಾರಂಭವು ಡಿ. 13 ರಂದು ನಡೆಯಲಿದೆ.

ಬೆಳಗ್ಗೆ 10 ಕ್ಕೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ ‌ವಹಿಸಲಿದ್ದಾರೆ. ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷ ದೇವರಾಜ್ ನೂಜಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬೆಳಂದೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ‌ಅವರು ಶೌಚಾಲಯ ಮತ್ತು ಕೈ ತೊಳೆಯುವ ಘಟಕಗಳ ಉದ್ಘಾಟನೆ ಮಾಡಲಿದ್ದಾರೆ.





















































 
 

ಮುಖ್ಯ ಅತಿಥಿಗಳಾಗಿ ಬೆಳಂದೂರು ಗ್ರಾ.ಪಂ. ಸದಸ್ಯರುಗಳಾದ ಲೋಹಿತಾಕ್ಷ ಕೆಡೆಂಜಿಕಟ್ಟ, ತಾರಾ ಅನ್ಯಾಡಿ, ಗೀತಾ ಕುವೆತ್ತೋಡಿ, ಪ್ರವೀಣ್ ಕೆರೆನಾರು, ರವಿ ಕುಮಾರ್ ಕೆಡೆಂಜೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರಿನ ಕ್ಷೇತ್ರ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಸವಣೂರು ಸಮೂಹ ಸಂಪನ್ಮೂಲ ವ್ಯಕ್ತಿ ಜಯಂತ್ ವೈ., ಕುದ್ಮಾರುಗುತ್ತು ರಾಜ್‌ದೀಪಕ್ ಜೈನ್, ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಕುದ್ಮಾರು ಇಲ್ಲಿನ ಅನುವಂಶೀಯ ಮೊಕ್ತೇಸರ ಪ್ರವೀಣ್ ಕುಮಾರ್ ಕೆಡೆಂಜಿಗುತ್ತು, ಕೃಷಿಕ ಸಮಾಜ ಕಡಬ ತಾಲೂಕು ಇದರ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಬಿ.ಎಸ್.ಎನ್.ಎಲ್.ನ ನಿವೃತ್ತ ಜೆ.ಇ. ಶೂರಪ್ಪ ಗೌಡ ಪಟ್ಟೆತ್ತಾನ, ಎಸ್. ಬಾವ ಕುದ್ಮಾರು ಮೊದಲಾದವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಲೆಯ ಸಹ ಶಿಕ್ಷಕಿ ವೀರಾ ಡಿ’ಸೋಜಾ, ಎಸ್.ಡಿ.ಎಂ.ಸಿ. ಯ ಮಾಜಿ ಅಧ್ಯಕ್ಷೆ ನವ್ಯಾ ಅನ್ಯಾಡಿ ಅವರನ್ನು ಸನ್ಮಾನಿಸಲಾಗುವುದು.

ಅಪರಾಹ್ನ ಕೂರ ಮತ್ತು ಬರೆಪ್ಪಾಡಿ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಶಾಲಾ ಮಕ್ಕಳಿಂದ ಕಲಾ ಸಂಜೆ, ಹಿರಿಯ ವಿದ್ಯಾರ್ಥಿಗಳು ಮತ್ತು ನಾಡಿನ ಪ್ರಸಿದ್ಧ ಕಲಾವಿದರಿಂದ ವಿವಿಧ ವಿನೋದಾವಳಿಗಳು ಮತ್ತು ನೃತ್ಯ ವೈಭವ ನಡೆಯಲಿರುವುದಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!
Scroll to Top