ಗ್ಯಾರಂಟಿ ನಂಬಿ ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ದೂರು
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಶಾಸಕರು ಈಗ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಬೆಳಗಾವಿಯ ಹೋಟೆಲೊಂದರಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹಲವು ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ, ಗ್ಯಾರಂಟಿಗಳನ್ನು ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಗ್ಯಾರಂಟಿ ಬಿಟ್ಟು ನಮಗೆ ಅಭಿವೃದ್ಧಿ ಯೋಜನೆಗಳನ್ನು ಕೊಡಿ. ಜನರು ಗ್ಯಾರಂಟಿಗಳ ಬಗ್ಗೆ ಶ್ಲಾಘನೆ ಮಾಡಿ ಮಾತನಾಡುತ್ತಿಲ್ಲ. ಗ್ಯಾರಂಟಿಯೇ ನಮಗೆ ಚುನಾವಣೆಯಲ್ಲಿ ಕೆಲಸ ಮಾಡುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಶಾಸಕರು ಹೇಳಿದ್ದಾರೆ.
ಜನರು ದೇವಸ್ಥಾನ, ಸಭಾ ಭವನ, ರಸ್ತೆ ಅಭಿವೃದ್ಧಿ ಸೇರಿ ಹಲವು ಕಾರ್ಯಕ್ರಮಗಳಿಗೆ ಅನುದಾನ ಕೇಳುತ್ತಿದ್ದಾರೆ. ಮುಖ್ಯವಾಗಿ ರಸ್ತೆಗೆ ಹೆಚ್ಚಿನ ಬೇಡಿಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಸರ್ಕಾರ ನಮ್ಮ ನೆರವಿಗೆ ಬರಬೇಕು ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
























