ಮೊದಲ ಪಂದ್ಯದ ಅಮೋಘ ಗೆಲುವಿನ ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ
ಚಂಡೀಗಢ : ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲ ಪಂದ್ಯವನ್ನು ಏಕಪಕ್ಷೀಯವಾಗಿ ಗೆದ್ದಿರುವ ಭಾರತ ಇಂದು ಚಂಡೀಗಢದಲ್ಲಿ ನಡೆಯಲಿರುವ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಹೀನಾಯವಾಗಿ ಸೋಲಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ. 101 ರನ್‌ಗಳ ಅಮೋಘ ಗೆಲುವಿನ ಜೊತೆಗೆ ಹಲವು ವಿಶ್ವ ದಾಖಲೆಗಳನ್ನು ಕೂಡ ಈ ಪಂದ್ಯದಲ್ಲಿ ಭಾರತ ತನ್ನದಾಗಿಸಿಕೊಂಡಿದೆ. ಏಕಪಕ್ಷೀಯವಾಗಿ ಸಾಗಿದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಯಾವ ವಿಭಾಗದಲ್ಲೂ ಭಾರತಕ್ಕೆ ಸರಿಸಾಟಿಯಾಗಲಿಲ್ಲ. ಇದೇ ಆತ್ಮವಿಶ್ವಾದಲ್ಲಿ ಭಾರತ ಎರಡನೇ ಪಂದ್ಯಕ್ಕೆ ಸಜ್ಜಾಗಿದೆ.
ಐದು ಪಂದ್ಯಗಳ ಸರಣಿಯ ದ್ವಿತೀಯ ಪಂದ್ಯ ಚಂಡೀಗಢದಲ್ಲಿ ಜರುಗಲಿದೆ. ಈ ಪಂದ್ಯಕ್ಕೆ ಚಂಡೀಗಢದ ಮುಲ್ಲನ್ಪುರ್ನಲ್ಲಿರುವ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಸ್ಟೇಡಿಯಂ ಆತಿಥ್ಯ ವಹಿಸಲಿದೆ. ಈ ಸರಣಿಯ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 7 ಗಂಟೆಗೆ ಶುರುವಾಗಲಿವೆ. ಟಾಸ್ ಪ್ರಕ್ರಿಯೆ 6.30ಕ್ಕೆ ನಡೆಯಲಿದೆ.
ಸೌತ್ ಆಫ್ರಿಕಾ ತಂಡ: ಐಡನ್ ಮಾರ್ಕ್ರಾಮ್ (ನಾಯಕ), ಓಟ್ನಿಲ್ ಬಾರ್ಟ್‌ಮನ್, ಕಾರ್ಬಿನ್ ಬಾಷ್, ಡೆವಾಲ್ಡ್ ಬ್ರೆವಿಸ್, ಕ್ವಿಂಟನ್ ಡಿ ಕಾಕ್ (ವಿಕೆಟ್‌ಕೀಪರ್), ಡೊನೊವನ್ ಫೆರೇರಾ, ರೀಝ ಹೆಂಡ್ರಿಕ್ಸ್, ಮಾರ್ಕೋ ಯಾನ್ಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಜಾರ್ಜ್ ಲಿಂಡೆ, ಲುಂಗಿ ಎನ್‌ಗಿಡಿ, ಅನ್ರಿಕ್ ನೋಕಿಯ, ಲುಥೋ ಸಿಪಮ್ಲಾ, ಟ್ರಿಸ್ಟನ್ ಸ್ಟಬ್ಸ್.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಶುಭ್ಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಆರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್.
























