ಹಾರಾಡಿಯಲ್ಲಿ ಕಲನ 2025

ಪುತ್ತೂರು: ಇಲ್ಲಿನ ಹಾರಾಡಿಯಲ್ಲಿರುವ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಾರಥ್ಯದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಹಯೋಗದೊಂದಿಗೆ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲನ 2025’ ವ್ಯವಸ್ಥಿತವಾಗಿ ಉದ್ಘಾಟನೆಗೊಂಡಿತು.

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸುಲೋಚನಿಯವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಅವರು ನೆರವೇರಿಸಿದರು. ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ವಿಜಯಿಗಳಾಗಿ ಎಂದು ಸ್ಪರ್ಧಿಗಳಿಗೆ ಕಿವಿಮಾತು ಹೇಳಿದರು.

ಸಭಾಧ್ಯಕ್ಷರು ಮಾತನಾಡಿ ಸರ್ವರ ಸಹಕಾರ ಕೋರಿದರು. ವೇದಿಕೆಯಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ, ಕಡಬ ತಾಲೂಕು ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತಾರಾಮ ಓಡ್ಲ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಾಮಚ್ಚನ್, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ನವೀನ್ ಸ್ಟೀಫನ್ ವೇಗಸ್, ಶಿಕ್ಷಣ ಸಂಯೋಜಕರಾದ ಹರಿಪ್ರಸಾದ್, ಪುಷ್ಪಾವತಿ, ಅಮೃತಕಲಾ, ಶಾಲಾ ಮುಖ್ಯೋಪಾಧ್ಯಾಯ ಕುಕ್ಕೆ ಮತ್ತು ಇತರರು ಉಪಸ್ಥಿತರಿದ್ದರು.





















































 
 
error: Content is protected !!
Scroll to Top