ಡಿ.16 : ಧರ್ಮಸ್ಥಳದಲ್ಲಿ ಮಹಿಳಾ ನ್ಯಾಯ ಸಮಾವೇಶ

ಕೊಂದವರು ಯಾರು ಅಭಿಯಾನ ಸಮಿತಿಯಿಂದ ಮೌನ ಮೆರವಣಿಗೆ

ಮಂಗಳೂರು: ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಅತ್ಯಾಚಾರ, ಕೊಲೆ, ಅಸಹಜ ಸಾವುಗಳಿಗೆ ಕಾರಣ ಯಾರು ಎಂದು ಪತ್ತೆಹಚ್ಚಲು ಒತ್ತಾಯಿಸಿ ವಿವಿಧ ಮಹಿಳಾ ಸಂಘಟನೆಗಳ ಸಹಭಾಗಿತ್ವದಲ್ಲಿ ಕೊಂದವರು ಯಾರು ಅಭಿಯಾನ ಸಮಿತಿಯ ವತಿಯಿಂದ ಮಹಿಳೆಯರ ಮೌನ ಮೆರವಣಿಗೆ ಹಾಗೂ ಮಹಿಳಾ ನ್ಯಾಯ ಸಮಾವೇಶ ಡಿ.16ರಂದು ಬೆಳ್ತಂಗಡಿಯಲ್ಲಿ ನಡೆಯಲಿದ್ದು, ರಾಜ್ಯದ ವಿವಿಧ ಭಾಗಗಳಿಂದ 1,000ದಷ್ಟು ಮಹಿಳೆಯರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅಭಿಯಾನದ ಪ್ರಮುಖರಾದ ಜ್ಯೋತಿ ಎ. ತಿಳಿಸಿದ್ದಾರೆ.

ಶುಕ್ರವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮಸ್ಥಳ ಹಾಗೂ ಸುತ್ತಮುತ್ತಲಿನಲ್ಲಿ ನಡೆದ ಅಸಹಜ ಸಾವು ಅತ್ಯಾಚಾರ ಪ್ರಕರಣಗಳಿಗೆ ಕಾರಣ ಯಾರು ಎಂದು ಈವರೆಗೂ ಪತ್ತೆಯಾಗಿಲ್ಲ. ಬೇರೆಡೆ ಇಂತಹ ಪ್ರಕರಣಗಳಲ್ಲಿ ಆರೋಪಿಗಳು ಪತ್ತೆಯಾಗುತ್ತವೆಯಾದರೂ ಇಲ್ಲಿ ಮಾತ್ರ ಆರೋಪಿಗಳ ಪತ್ತೆ ಯಾಕಾಗುವುದಿಲ್ಲ. ವ್ಯವಸ್ಥೆ ಇಷ್ಟು ವರ್ಷಗಳ ಕಾಲ ಏನು ಮಾಡುತ್ತಿದೆ ಎಂಬುದು ಮಹಿಳೆಯರು ಹಾಗೂ ಪ್ರಜ್ಞಾವಂತರ ಪ್ರಶ್ನೆಯಾಗಿದೆ ಎಂದು ಹೇಳಿದರು.





















































 
 

ಎಸ್‌ಐಟಿ ವಿಚಾರಣೆ ಸಂಪೂರ್ಣವಾಗಿ ಮಹಿಳೆಯರು ಮತ್ತಿತರ ನೊಂದವರಿಗೆ ನ್ಯಾಯ ದೊರಕಿಸುವ ಸುತ್ತ ಕೇಂದ್ರೀಕೃತವಾಗಿರಬೇಕು. ಎಸ್‌ಐಟಿ ರಚಿಸುವಾಗ ಸರ್ಕಾರ ಹೊರಡಿಸಿದ ಆದೇಶದಲ್ಲಿ ಹೇಳಿರುವಂತೆ ಈ ವ್ಯಾಪ್ತಿಯಲ್ಲಿ ದಾಖಲಾಗಿರುವ ಮತ್ತು ದಾಖಲಾಗುವ ಎಲ್ಲ ಅಪರಾಧ ಪ್ರಕರಣಗಳ ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಯಾರ ವಿರುದ್ಧವೂ ನಮ್ಮ ಆರೋಪವಿಲ್ಲ. ಯಾರು ಕೊಂದವರು, ಯಾರು ಅತ್ಯಾಚಾರಿಗಳು ಎಂದು ಬಿಟ್ಟು ಮಾಡುತ್ತಿಲ್ಲ. ಆದರೆ ಆಗಿರುವ ಘಟನೆಗಳ ಆರೋಪಿಗಳನ್ನು ಪತ್ತೆಹಚ್ಚಬೇಕು ಎಂಬುದಷ್ಟೇ ನಮ್ಮ ಹೋರಾಟ ಎಂದು ಅವರು ಹೇಳಿದರು.

ಡಿ.16ರಂದು 10.30ಕ್ಕೆ ಬೆಳ್ತಂಗಡಿ ಮಾರಿಗುಡಿಯಿಂದ ಮೌನ ಮೆರವಣಿಗೆ ನಡೆಯಲಿದೆ. ಭಿತ್ತಿಪತ್ರಗಳನ್ನು ಹಿಡಿದು ನಡೆಯುವ ಮೆರವಣಿಗೆ ಬಳಿಕ ತಾಲೂಕು ಕಚೇರಿ ಆವರಣದಲ್ಲಿ ಮಹಿಳಾ ಜ್ಯೋತಿ ಎ. ತಿಳಿಸಿದರು. ಹೋರಾಟದ ಬಗ್ಗೆ ಮಾಹಿತಿ ನೀಡಿದ ಪ್ರಸನ್ನ ರವಿ ನಮ್ಮ ಹೋರಾಟವನ್ನು ಷಡ್ಯಂತ್ರ ಕೋರ್ಟ್
ಆದೇಶ ಬಂದಿದೆ ಎನ್ನುವ ರೀತಿಯಲ್ಲಿ ತೇಜೋವಧೆ ಮಾಡಲಾಗುತ್ತಿದೆ ಪ್ರತಿಭಟನೆ ಇಲ್ಲ ಎಂದು ಬಿಂಬಿಸಿ ಸಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಹಾಕಲಾಗುತ್ತಿದೆ. ಇದು ಯಾರ ಷಡ್ಯಂತ್ರ ಎಂಬ ಪ್ರಶ್ನೆಗೆ ಉತ್ತರ ಬೇಕಾಗಿದೆ. ಕೆಲ ಮಾಧ್ಯಮಗಳ ಮೂಲಕ ಈ ರೀತಿಯ ದಿಕ್ಕು ತಪ್ಪಿಸುವ ಕೆಲಸ ನಡೆಸುತ್ತಿರುವ ಬಗ್ಗೆ ನಮಗೆ ನೋವಿದೆ. ನಾವು ಕಾನೂನಾತ್ಮಕವಾಗಿ ಹೋರಾಟ ಮಾಡುತ್ತಿದ್ದೇವೆ. 20 ವರ್ಷಗಳ ಅವಧಿಯಲ್ಲಿ ನಡೆವಿರುವ ಸುಮಾರು 70ರಷ್ಟು ಪ್ರಕರಣಗಳ ತನಿಖೆ ಕೂಲಂಕಷವಾಗಿ ನಡೆಯಬೇಕು ಎಂದು ಒತ್ತಾಯಿಸಿ ನ್ಯಾಯ ಸಮಾವೇಶ ನಡೆಯಲಿದೆ ಎಂದು ತಿಳಿಸಿದರು.

error: Content is protected !!
Scroll to Top