ಕುದ್ಮಾರು ಶಾಲಾ ವಾರ್ಷಿಕೋತ್ಸವ

ಕಾಣಿಯೂರು: ಅನೇಕ ಏಳುಬೀಳುಗಳನ್ನು ಕಂಡ ಕುದ್ಮಾರು ಶಾಲೆಯು ಇದೀಗ ಎಲ್ಲರ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಸಂಭ್ರಮದಿಂದ ಆಚರಿಸುತ್ತಿರುವ ಶಾಲಾ ವಾರ್ಷಿಕೋತ್ಸವ ಊರ ಹಬ್ಬವಾಗಿ ಮೂಡಿಬಂದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಶೂರಪ್ಪ ಗೌಡ ಪಟ್ಟೆತ್ತಾನ ಹೇಳಿದರು. ಅವರು ಡಿ.13ರಂದು ನಡೆದ ಕುದ್ಮಾರು ಸ.ಉ.ಹಿ.ಪ್ರಾ.ಶಾಲೆ ಹಾಗೂ ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ ಅಬೀರ ಮಾತನಾಡಿ, ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಶಾಲಾ ವಾರ್ಷಿಕೋತ್ಸವ ಉತ್ತಮ ವೇದಿಕೆಯಾಗಿದೆ. ವಿದ್ಯಾರ್ಥಿಗಳು ಒಳ್ಳೆಯ ಪ್ರಜೆಗಳಾಗಿ ರೂಪುಗೊಂಡು, ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು. ಅ ಮೂಲಕ ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.


ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಅನುವಂಶೀಯ ಮೊಕ್ತೇಸರರಾದ ಪ್ರವೀಣ್‌ಕುಮಾರ್ ಕೆಡೆಂಜಿಗುತ್ತು ಮಾತನಾಡಿ, ಕುದ್ಮಾರು ಶಾಲೆಯಲ್ಲಿ ನಡೆಯುವ ವಾರ್ಷಿಕೋತ್ಸವಕ್ಕೆ ತನ್ನದೇ ಆದ ಇತಿಹಾಸವಿದೆ. ವಿದ್ಯಾರ್ಥಿಗಳಲ್ಲಿ ಹುದುಗಿರುವ ಆಗಾಧವಾದ ಶಕ್ತಿಯನ್ನು ಅನಾವರಣಗೊಳಿಸಲು ಶಾಲಾ ವಾರ್ಷಿಕೋತ್ಸವದಂತಹ ವೇದಿಕೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಕುದ್ಮಾರು ಶಾಲೆಯ ಅಭಿವೃದ್ಧಿಯಲ್ಲಿ ಎಲ್ಲರ ಸಹಕಾರ ಅಗತ್ಯ ಎಂದರು.





















































 
 

ಕುದ್ಮಾರು ಸ.ಉ.ಹಿ.ಪ್ರಾ.ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದೇವರಾಜ್ ನೂಜಿರವರು ಧ್ವಜಾರೋಹಣ ನೆರವೇರಿಸಿದರು. ಬೆಳಂದೂರು ಗ್ರಾ.ಪಂ.ಅಧ್ಯಕ್ಷೆ ತೇಜಾಕ್ಷಿ ಕೊಡಂಗೆಯವರು ಶೌಚಾಲಯ, ಕೈತೊಳೆಯುವ ಘಟಕಗಳ ಉದ್ಘಾಟಿಸಿದರು. ಬೆಳಂದೂರು ಗ್ರಾ.ಪಂ.ಸದಸ್ಯರಾದ ಲೋಹಿತಾಕ್ಷ ಕೆಡೆಂಜಿಕಟ್ಟ, ಪ್ರವೀಣ್ ಕೆರೆನಾರು, ಗೀತಾ ಕುವೇತ್ತೋಡಿ, ದಾನಿಗಳಾದ ಎಸ್.ಬಾವ ಕುದ್ಮಾರು, ಕಡಬ ತಾಲೂಕು ಸರಕಾರಿ ಪ್ರೌಢ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಶ್ರೀಲತಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಕಾರ್ಯದರ್ಶಿ ನಾಗೇಶ್ ಕೆಡೆಂಜಿ, ವಿದ್ಯಾರ್ಥಿ ನಾಯಕಿ ಫಾತಿಮತ್ ಶೈಮಾ ಉಪಸ್ಥಿತರಿದ್ದರು. ಆನಂದ ಸೌತೆಮಾರು, ದಾಮೋದರ ನಾಕಿರಣ, ನವ್ಯಾ ಅನ್ಯಾಡಿ, ಬಶೀರ್ ಕುದ್ಮಾರು, ದಿವ್ಯಾ ಕೆರೆನಾರು, ಯೋಗೀಶ್ ಬರೆಪ್ಪಾಡಿ, ಪೂರ್ಣಿಮಾ ಕೂಂಕ್ಯ, ರಮ್ಯಾ ಕುದ್ಮಾರು, ಗಣೇಶ್ ಕೊಯಕ್ಕುಡೆ, ಗೀತಾ, ನಳಿನಿ, ಆತಿಕಾ, ರಹಿಮತ್ ಅತಿಥಿಗಳನ್ನು ಗೌರವಿಸಿದರು.


ಶಾಲಾ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಾಲಾ ಮುಖ್ಯಗುರು ಮಿನಿ ವರ್ಗೀ ಸ್ ಉಪಸ್ಥಿತರಿದ್ದರು.

error: Content is protected !!
Scroll to Top