ಮಂಗಳೂರು: ಕ್ರಿಯೇಟಿವ್ ಪುಸ್ತಕ ಮನೆ ಕಾರ್ಕಳ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹಯೋಗದಲ್ಲಿ ಕ್ರಿಯೇಟಿವ್ ಪುಸ್ತಕ ಮನೆ ಪ್ರಕಾಶನದ ವಿಶೇಷ ಪ್ರಕಟಣೆಯಾದ ಡಾ. ಕೆ. ಚಿನ್ನಪ್ಪ ಗೌಡ ಅವರ ಸಂಶೋಧನಾ ಕೃತಿ ‘ಭೂತಾರಾಧನೆ – ಮಾಯದ ನಡೆ ಜೋಗದ ನುಡಿ’ ಕೃತಿ ಬಿಡುಗಡೆ ಸಮಾರಂಭ ನಡೆಯಿತು.
ಸಂತ ಅಲೋಶಿಯಸ್ ಪರಿಗಣಿತ ವಿವಿಯ ಎಲ್. ಎಫ್. ರಸ್ಕಿನ್ಹ ಸಭಾಂಗಣ, ಎಲ್.ಸಿ.ಆರ್.ಐ. ಬ್ಲಾಕ್ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಅಶ್ವಥ್ ಎಸ್. ಎಲ್. ವಹಿಸಿದ್ದರು.

ವಿಶ್ರಾಂತ ಕುಲಪತಿ, ಸಾಹಿತಿ ಮತ್ತು ಜಾನಪದ ವಿದ್ವಾಂಸ ಡಾ. ಬಿ. ಎ. ವಿವೇಕ ರೈ ಅವರು ಈ ಕೃತಿಯನ್ನು ಅನಾವರಣ ಮಾಡಿದರು.
ಸಾಹಿತಿ ಮತ್ತು ವಿಮರ್ಶಕ ಡಾ. ರಾಜಶೇಖರ ಹಳೆಮನೆ ಅವರು ಕೃತಿಯ ಅವಲೋಕನ ಮಾಡಿದರು.
ಅತಿಥಿಗಳಾಗಿ ಸಂತ ಅಲೋಶಿಯಸ್ ಪರಿಗಣಿತ ವಿವಿಯ ಕುಲಪತಿ ಡಾ. ಪ್ರವೀಣ್ ಮಾರ್ಟಿಸ್ ಎಸ್. ಜೆ., ಮಂಗಳ ಗಂಗೋತ್ರಿಯ ಎಸ್.ವಿ.ಪಿ. ಅಧ್ಯಯನ ಸಂಸ್ಥೆಯ ಅಧ್ಯಕ್ಷ ಡಾ. ನಾಗಪ್ಪ ಗೌಡ ಆರ್., ಲೇಖಕ ಮತ್ತು ಜನಪದ ವಿದ್ವಾಂಸ ಡಾ. ಕೆ. ಚಿನ್ನಪ್ಪ ಗೌಡ ಅವರು ಉಪಸ್ಥಿತರಿದ್ದರು.
ಸಮಾರಂಭದಲ್ಲಿ ದೈವ ನರ್ತಕ ಶೇಖರ ಪರವ ಕಾಪುಮಜಲು ಅವರಿಗೆ ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು.
























