ಮೊಟ್ಟೆಯಲ್ಲಿಲ್ಲ ಕ್ಯಾಕ್ಸರ್‌ಕಾರಕ ಅಂಶ : ಎಫ್‌ಎಸ್‌ಎಸ್‌ಎಐ

ಮಾಧ್ಯಮಗಳಲ್ಲಿ ಹರಿದಾಡಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ

ನವದೆಹಲಿ: ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ರಾಸಾಯನಿಕ ಇಲ್ಲ, ಈ ಬಗ್ಗೆ ಯಾವುದೇ ಆತಂಕದ ಅಗತ್ಯವಿಲ್ಲ ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ) ತಿಳಿಸಿದೆ.

ಮೊಟ್ಟೆಗಳಲ್ಲಿ ಕ್ಯಾನ್ಸರ್‌ಕಾರಕ ನೈಟ್ರೋಪ್ಯೂರಾನ್ ಅಂಶ ಪತ್ತೆಯಾಗಿರುವುದಾಗಿ ಯೂಟ್ಯೂಬ್‌ ಚಾನಲ್‌ನಲ್ಲಿ ಒಂದರಲ್ಲಿ ಹೇಳಲಾಗಿತ್ತು. ಇದರ ಬೆನ್ನಲ್ಲೇ ಹಲವು ವಿಧದ ಮೊಟ್ಟೆಗಳ ಪರೀಕ್ಷೆ ನಡೆಸಿರುವ ಎಫ್‌ಎಸ್‌ಎಸ್‌ಎಐ, ಇದು ಜನರ ದಾರಿತಪ್ಪಿಸುವ ವರದಿಯಾಗಿದೆ. ಆ ಆರೋಪಕ್ಕೆ ಯಾವುದೇ ವೈಜ್ಞಾನಿಕ ಸಾಕ್ಷ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.





















































 
 

2011ರ ಆಹಾರ ಸುರಕ್ಷತೆ ನಿಯಮದಡಿಯಲ್ಲಿ ಕೋಳಿ ಸಾಕಣೆಯಲ್ಲಿ ನೈಟ್ರೋಪ್ಯೂರಾನ್ ಬಳಕೆಯನ್ನು ನಿಷೇಧಿಸಲಾಗಿದೆ. ಪ್ರತಿ ಕೆ.ಜಿ.ಯಲ್ಲಿ 1.0 – ಮೈಕ್ರೋಗ್ರಾಂನಷ್ಟಿದ್ದರೆ ಯಾವುದೇ ಅಪಾಯವಿಲ್ಲ ಎಂದು ಎಫ್‌ಎಸ್‌ಎಸ್‌ಎಐ ತಿಳಿಸಿದೆ.

ಸೋಷಿಯಲ್‌ ಮೀಡಿಯಾದಲ್ಲಿ ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ಅಂಶ ಇದೆ ಎಂಬ ವೀಡಿಯೋ ಹರಿದಾಡಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಈ ಸುದ್ದಿ ಹರಿದಾಡುತ್ತಿದ್ದಂತೆ ರಾಜ್ಯ ಸರ್ಕಾರ ಅಲರ್ಟ್‌ ಆಗಿ ಖಾಸಗಿ ಲ್ಯಾಬ್‌ಗಳಲ್ಲಿ ಮೊಟ್ಟೆ ಪರೀಕ್ಷಿಸಲು ಆದೇಶಿಸಿತ್ತು.

ಖಾಸಗಿ ಲ್ಯಾಬ್‌ನಲ್ಲಿ ಟೆಸ್ಟ್‌ಗೆ ಸೂಚಿಸಿರುವ ಸರ್ಕಾರ ಒಂದು ವಾರದಲ್ಲಿ ವರದಿ ನೀಡಲು ಆದೇಶಿಸಿದೆ. ಸರ್ಕಾರಿ ಲ್ಯಾಬ್‌ನಲ್ಲಿ ಹೆಚ್ಚಿನ ತಂತ್ರಜ್ಞಾನ ವ್ಯವಸ್ಥೆ ಇಲ್ಲದ ಕಾರಣ ಖಾಸಗಿ ಲ್ಯಾಬ್‌ನಲ್ಲಿ ಟೆಸ್ಟ್ ಮಾಡಲು ಆದೇಶಿಸಿದೆ.

error: Content is protected !!
Scroll to Top