ಪುತ್ತೂರು: ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯ ಬೆಳ್ಳಿ ಹಬ್ಬದ ಪ್ರಯುಕ್ತ ,ಪುತ್ತೂರಿನ ಮಾಜಿ ಸೈನಿಕರ ಸಂಘದ ಸಹಯೋಗದಲ್ಲಿ ಪರಮವೀರಚಕ್ರ ಪುರಸ್ಕೃತ ಕಾರ್ಗಿಲ್ ಹುಲಿ, ವೀರ ಯೋಧ ಗೌ. ಲೆ. ಸಂಜಯ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನಾ ಸಭೆ ಡಿ. 27 ರಂದು ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಗೌ. ಲೆ. ಸಂಜಯ್ ಕುಮಾರ್ ಅವರನ್ನು ದರ್ಬೆ ವೃತ್ತದಿಂದ ಕಿಲ್ಲೆ ಮೈದಾನದ ಅಮರ್ ಜವಾನ್ ಜ್ಯೋತಿ ಸ್ಮಾರಕದವರೆಗೆ ಭವ್ಯ ಮೆರವಣಿಗೆಯ ಮೂಲಕ ಕರೆತರಲಾಗುವುದು.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವೀರ ಯೋಧನಿಗೆ ಅಭಿನಂದನೆ ಸಲ್ಲಿಸುವ ಅವಕಾಶ ಇರುವುದಾಗಿ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
























