16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌ : ಹೈಕೋರ್ಟ್‌ ಸಲಹೆ

ಆಸ್ಟ್ರೇಲಿಯಾ ಮಾದರಿ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಚಿಂತನೆ

ಚೆನ್ನೈ: ಆಸ್ಟ್ರೇಲಿಯಾದ ಮಾದರಿಯಲ್ಲಿ ಭಾರತದಲ್ಲೂ 16 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಕಾನೂನು ಜಾರಿಗೆ ತರುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.

ಅಪ್ರಾಪ್ತ ವಯಸ್ಕರು ಸೋಷಿಯಲ್ ಮೀಡಿಯಾದಲ್ಲಿ ಸುಲಭವಾಗಿ ಅಶ್ಲೀಲ ವಿಷಯಗಳಿಗೆ ಒಡ್ಡಿಕೊಳ್ಳುತ್ತಿರುವುದನ್ನು ತಡೆಗಟ್ಟಲು ಆಸ್ಟ್ರೇಲಿಯಾ ಮಾದರಿ ಕಾನೂನನ್ನ ಭಾರತದಲ್ಲಿ ಪರಿಗಣಿಸಬೇಕು ಎಂದು ಮದ್ರಾಸ್ ಕೋರ್ಟ್ ಸಲಹೆ ನೀಡಿದೆ.





















































 
 

ನ್ಯಾಯಮೂರ್ತಿಗಳಾದ ಜಿ.ಜಯಚಂದ್ರನ್ ಮತ್ತು ಕೆ.ಕೆ.ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠ ಪಿಐಎಲ್ ಅರ್ಜಿ ವಿಚಾರಣೆ ನಡೆಸುತ್ತಿದ್ದ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಂಟರ್‌ನೆಟ್ ಸೇವೆ ಒದಗಿಸುವವರು ಪೋಷಕರ ನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಮಕ್ಕಳ ಇಂಟರ್‌ನೆಟ್ ಬಳಕೆಯ ಅಪಾಯಗಳನ್ನು ನ್ಯಾಯಾಲಯ ಒಪ್ಪಿಕೊಂಡಿದ್ದು, ಇದರಲ್ಲಿ ಪೋಷಕರ ಜವಾಬ್ದಾರಿಯೂ ಹೆಚ್ಚು ಎಂದಿದೆ. ಆಸ್ಟ್ರೇಲಿಯಾದಲ್ಲಿ ಈ ಕಾನೂನನ್ನು ಕಳೆದ ಡಿಸೆಂಬರ್ 10ರಿಂದ ಜಾರಿಗೊಳಿಸಲಾಗಿದೆ.

error: Content is protected !!
Scroll to Top