ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಮೃತ್ಯು

ಬಂಟ್ವಾಳ: ಬೈಕ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಮಧ್ಯಾಹ್ನ ಪೂಂಜಾಲಕಟ್ಟೆ ಸಮೀಪದ ಕಟ್ಟೆಮನೆ ಎಂಬಲ್ಲಿ ಸಂಭವಿಸಿದೆ. ಕುಕ್ಕಾಜೆ ನಿವಾಸಿ ಇಮ್ರಾನ್ ಯಾನೆ ಎಸ್.ಎ.ಮುಹಮ್ಮದ್ ತ್ವಾಹಾ ಮೃತಪಟ್ಟವರು.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಇಮ್ರಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಡಿಸಿಆರ್‌ಇ ಘಟಕದ ಸಿಬ್ಬಂದಿ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top