ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಮೋದಿ

ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಹಾರೈಕೆ

ನವದೆಹಲಿ : ಜಗತ್ತು 2026ಕ್ಕೆ ಕಾಲಿಡುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ದೇಶದಲ್ಲಿ ಶಾಂತಿ ನೆಲೆಸಿ, ಪ್ರಜೆಗಳಿಗೆ ಉತ್ತಮ ಆರೋಗ್ಯ, ಸಮೃದ್ಧಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ. ಎಕ್ಸ್‌​​ನಲ್ಲಿ ಸಂದೇಶವನ್ನು ಹಂಚಿಕೊಂಡಿರುವ ಮೋದಿ, ಜನರು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ಸು ಪಡೆಯಲಿ ಎಂದು ಹಾರೈಸಿದ್ದಾರೆ. ಹೊಸ ವರ್ಷವು ನಿಮ್ಮ ಪ್ರಯತ್ನಗಳಲ್ಲಿ ಯಶಸ್ಸು ಮತ್ತು ನೀವು ಮಾಡುವ ಎಲ್ಲದರಲ್ಲೂ ಸಾಧನೆಯೊಂದಿಗೆ ಉತ್ತಮ ಆರೋಗ್ಯ ಮತ್ತು ಸಮೃದ್ಧಿ ತರಲಿ ಎಂದಿದ್ದಾರೆ.

ದೆಹಲಿ ಮತ್ತು ಮುಂಬೈ ಸೇರಿದಂತೆ ಪ್ರಮುಖ ಮಹಾನಗರಗಳಲ್ಲಿ ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಲಾಗಿದೆ. ಇಂಡಿಯಾ ಗೇಟ್, ಕನ್ನಾಟ್ ಪ್ಲೇಸ್ ಮತ್ತು ಮೆರೈನ್ ಡ್ರೈವ್‌ನಂತಹ ಪ್ರಸಿದ್ಧ ಸ್ಥಳಗಳಲ್ಲಿ ಬಳಿ ದೊಡ್ಡ ಜನಸಮೂಹ ಜಮಾಯಿಸಿ, ಹಬ್ಬದ ವಾತಾವರಣವನ್ನು ಸೃಷ್ಟಿಸಿತು. ದೇಶಾದ್ಯಂತ ರಾಜ್ಯ ಸರ್ಕಾರಗಳು ಹೊಸ ವರ್ಷವನ್ನು ಭವ್ಯ ಆಚರಣೆಗಳು, ಕೌಂಟ್‌ಡೌನ್ ಪಾರ್ಟಿಗಳು ಸ್ವಾಗತಿಸಿದವು.





















































 
 

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಶುಭಾಶಯ ಪೋಸ್ಟ್​ ಮಾಡಿದ್ದು, ಅದರಲ್ಲಿ ನಿಮ್ಮೆಲ್ಲರಿಗೂ ಹೊಸ ವರ್ಷದ ಹೃತ್ಪೂರ್ವಕ ಶುಭಾಶಯ. ಹೊಸ ವರ್ಷದ ಈ ಶುಭ ಸಂದರ್ಭವು ಪ್ರತಿಯೊಬ್ಬ ನಾಗರಿಕನ ಜೀವನದಲ್ಲಿ ಹೊಸ ಭರವಸೆ, ಸಕಾರಾತ್ಮಕ ಶಕ್ತಿ ಮತ್ತು ನಿರಂತರ ಪ್ರಗತಿಯ ತರಲಿ ಎಂದಿದ್ದಾರೆ.

error: Content is protected !!
Scroll to Top