ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು

ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ.

ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ ಸೇರಿರಲಿಲ್ಲ. ರಾಜಶೇಖರ್ ರೆಡ್ಡಿಗೆ ಸಂತಾಪ ಸೂಚಿಸುತ್ತೇನೆ. ಆ ಕುಟುಂಬಕ್ಕೆ ನೋವು ತಡೆಯುವ ಶಕ್ತಿ ಕೊಡಲೆಂದು ದೇವರಲ್ಲಿ ಪ್ರಾರ್ಥನೆ ಮಾಡ್ತೇನೆ. ಈಗಾಗಲೇ ಆಗಿರುವ ಪ್ರತಿಯೊಂದೂ ಮಾಹಿತಿಯನ್ನೂ ಹೇಳಿದ್ದೇನೆ ಎಂದು ಹೇಳಿದ್ದಾರೆ.





















































 
 

ಬ್ಯಾನರ್ ಕಟ್ಟುವುದು ಬೇಡ ಎಂದು ಹೇಳಿಲ್ಲ. ಕಾರು ಹೋಗುವುದಕ್ಕೆ ಜಾಗ ಬಿಟ್ಟು ಕಟ್ಟಲು ಹೇಳಲಾಗಿತ್ತು. ಜಗಳ ಮಾಡಲೇಬೇಕು ಎಂದು ಪ್ಲಾನ್ ಮಾಡಿಕೊಂಡು ಬಂದಿದ್ದಾರೆ. ಜನಾರ್ದನ ರೆಡ್ಡಿ ಬರುವಾಗ ಏಕಾಏಕಿ ಜಗಳ ಆಯ್ತು. ನಾನೂ ಬಂದೆ, ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದರು. ಅಷ್ಟರೊಳಗೆ ಪೊಲೀಸರು ಬಂದು, ಚದುರಿಸಿದರು, ಆಗ ಗುಂಪು ಜಾಸ್ತಿ ಆಗಿ ಘೋಷಣೆಗಳು ಜಾಸ್ತಿ ಆದವು. ಅದಕ್ಕೂ ಮೊದಲು ಸತೀಶ್ ರೆಡ್ಡಿ ಬಾಡಿಗಾರ್ಡ್‌ಗಳು ಸಿನಿಮಾದಲ್ಲಿ ಹೊಡೆದಂತೆ ಬುಲೆಟ್ ಫೈರ್ ಮಾಡಿದರು. ಬಳ್ಳಾರಿಯಲ್ಲಿ 1982ರಲ್ಲಿ ಮಾತ್ರ ಒಂದು ಘಟನೆ ನಡೆದಿತ್ತು. ಆ ರೀತಿಯ ಘಟನೆ ಮತ್ತೆ ಇದೀಗ ನಡೆದಿದೆ. ಜನಾರ್ದನ ರೆಡ್ಡಿ ಅವರ ಮನೆ ಮುಂದೆ ಬ್ಯಾನರ್ ಕಟ್ಟಿ ಗಲಾಟೆ ಮಾಡಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಫೈರಿಂಗ್ ಮಾಡಿದ್ದಾರೆ. ಫೈರಿಂಗ್ ಮಾಡುವುದಕ್ಕೆ ಅವಕಾಶ ಯಾರು ಕೊಟ್ಟರು? ಮೇಲ್ನೋಟಕ್ಕೆ ಅವರಿಂದಲೇ ಫೈರಿಂಗ್ ಆಗಿರುವುದಸುದು ಗೊತ್ತಾಗುತ್ತಿದೆ ಎಂದು ಹೇಳಿದ್ದಾರೆ.

ಮಳೆ ಸುರಿಸಿದಂತೆ ಕಲ್ಲು ಸುರಿಸಿದ್ದಾರೆ. ನಮ್ಮ ಕಾರ್ಯಕರ್ತರು, ಮುಖಂಡರು ಗಾಯಗೊಂಡಿದ್ದಾರೆ. ಈಗಾಗಲೇ ನಮ್ಮವರನ್ನ ಡಿಸ್ಚಾರ್ಜ್ ಮಾಡಿದ್ದಾರೆ. ಅವರು ಕಲ್ಲು ತೂರಾಟ ಮಾಡಿದಾಗ, ನಮ್ಮವರೂ ಕಲ್ಲು ತೂರಿದ್ದಾರೆ. ಅವರ ಗನ್‌ಮ್ಯಾನ್‌ಗಳೇ ಗುಂಡು ಹಾರಿಸಿದ್ದಾರೆ. ಸತೀಶ್ ರೆಡ್ಡಿ ಹಾಲಿ, ಮಾಜಿ ಶಾಸಕನೂ ಅಲ್ಲ. ಬಿಹಾರ್ ಮಾದರಿಯಲ್ಲಿ ಸತೀಶ್ ರೆಡ್ಡಿ ಗನ್ ಇಟ್ಕೊಂಡಿದ್ದಾನೆ. ಎಷ್ಟು ದೌರ್ಜನ್ಯ ಇವರದ್ದು? ಆ ರೀತಿ ಫೈರ್ ಮಾಡುತ್ತಾ ಹೋದ್ರೆ ಏನ್ ಮಾಡೋದಕ್ಕೆ ಆಗ್ತದೆ? ಹಾಗಾಗಿ ಕಾರ್ಯಕರ್ತರೆಲ್ಲರೂ ಒಂದೆಡೆ ಸೇರಿದ್ದಾರೆ. ಆದರೂ ನಾವು ಶಾಂತಿ, ಕಾನೂನು ಸುವ್ಯವಸ್ಥೆ ಹಾಳಾಗಬಾರದು ಎಂದು ಹೇಳಿದ್ದೇವೆ. ಸತ್ಯವನ್ನೂ ಯಾರೂ ಮುಚ್ಚಡಲು ಆಗಲ್ಲ. ಕೆಟ್ಟ ಕೆಲಸ ಮಾಡಿದ ದಿನ ರಾಜಕಾರಣದಲ್ಲಿ ಇರೋದಿಲ್ಲ. ಶಾಂತಿಯಾದ ಊರಲ್ಲಿ ಈ ರೀತಿ ದೌರ್ಜನ್ಯ ಮಾಡಿ, ಫೈರಿಂಗ್ ಮಾಡೋದು ಅಂದ್ರೆ ಏನು? ಇದು ಪೋಲಿಸರಿಂದ ಆಗಿರೋ ಫೈರಿಂಗ್ ಅಲ್ಲ. ಖಾಸಗಿ ವ್ಯಕ್ತಿಯಿಂದ ಆಗಿರೋದು. ಯಾರ ಗನ್‌ನಿಂದ ಯಾರು ಹಾರಿಸಿದ್ದಾರೆ ಅದನ್ನ ಪತ್ತೆ ಹಚ್ಚಲು ಹೇಳಿದ್ದೇನೆ. ನಮ್ಮ ಗನ್‌ಮ್ಯಾನ್ ಬಳಿಯ ಬುಲೆಟ್‌ಗಳನ್ನೂ ಲೆಕ್ಕ ಮಾಡಲಿ. ಕೂಡಲೇ ಎಫ್‌ಎಸ್‌ಎಲ್ ಕೊಡಿ ಎಂದು ಮನವಿ ಮಾಡಿದರು.

ಪ್ರಕರಣದ ಬಗ್ಗೆ ಸಿಟ್ಟಿಂಗ್ ಹೈಕೋರ್ಟ್ ಜಡ್ಜ್ ಅವರಿಂದ ತನಿಖೆ ಮಾಡಿಸಿ. ನಾವು ಎಲ್ಲೂ ಓಡಿ ಹೋಗಲ್ಲ. ನಿರೀಕ್ಷಣಾ ಜಾಮೀನು ಅದೆಲ್ಲಾ ತಗೊಳಲ್ಲ. ಪೊಲೀಸರು ನಮ್ಮನ್ನು ರಕ್ಷಣೆ ಮಾಡಿದ್ದಾರೆ. ಸಿಟ್ಟಿಂಗ್ ಜಡ್ಜ್ ಅವರಿಂದ ತನಿಖೆ ಆಗದಿದ್ದರೆ ಸಿಬಿಐ ತನಿಖೆ ಆಗಲಿ. ಗೆದ್ದಾಗಿನಿಂದಲೂ ಜನಾರ್ದನ ರೆಡ್ಡಿ ಅವರಿಗೆ ತೊಂದರೆ ಕೊಡುತ್ತಿದ್ದಾರೆ. ಎಷ್ಟು ದಿನಗಳ ಕಾಲ ಅಂತಾ ಕೈ ಕಟ್ಟಿ ಕೂರೋದಕ್ಕೆ ಆಗುತ್ತೆ? ನಮ್ಮ ಪಾರ್ಟಿಯ ಶಾಸಕರು ಅವರು. ಅವರ ಪರವಾಗಿ ನಾವು ನಿಂತಿದ್ದೇವೆ. ಇದಕ್ಕೆ ಏನೋ ಒಂದು ಬಣ್ಣ ಹಚ್ಚಲು ಹೋಗಬೇಡಿ ಎಂದು ವಾಗ್ದಾಳಿ ನಡೆಸಿದರು.

error: Content is protected !!
Scroll to Top