ದಾವಣಗೆರೆ: ಸಾರ್ವಜನಿಕ ಸ್ಥಳದಲ್ಲಿ ಮಚ್ಚು ಹಿಡಿದು ಪುಂಡಾಟ ಮೆರೆದ ಇಬ್ಬರು ರೌಡಿ ಶೀಟರ್‌ಗಳನ್ನು ಕೆಟಿಜೆ ನಗರ ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ ಭಾರೀ ಪ್ರಮಾಣದ ಗಾಂಜಾ ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳನ್ನು ಸಾಹಿಲ್ ಮತ್ತು ರಾಕೇಶ್ ಎಂದು ಗುರುತಿಸಲಾಗಿದೆ.
ಮೂರು ದಿನಗಳ ಹಿಂದೆ ನಿಟ್ಟುವಳ್ಳಿ ಶ್ರೀರಾಮ ಬಡಾವಣೆಯಲ್ಲಿ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಈ ಸಮಯದಲ್ಲಿ ಅಟೋದಲ್ಲಿ ಬಂದ ಆರೋಪಿಗಳಿಬ್ಬರು ಲಾಂಗ್, ಮಚ್ಚು ಹಿಡಿದು ಓಡಾಟ ನಡೆಸಿದ್ದರು. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಇದರ ಆಧಾರದಲ್ಲಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಆರೋಪಿಗಳನ್ನು ಬಂಧಿಸಿ, ಅವರಿಂದ ಮಾರಕಾಯುಧಗಳನ್ನು, ಗಾಂಜಾ ವಶಕ್ಕೆ ಪಡೆಯಲಾಗಿದೆ.
























