ಪುತ್ತೂರು: ತಾಲೂಕು ಕುರಿಯ ಗ್ರಾಮದ ಬೂಡಿಯಾರು ಎಂಬಲ್ಲಿ ವಿದ್ಯುತ್ ತಂತಿ ತುಂಡಾಗಿ ಬಿದ್ದುದರ ಪರಿಣಾಮ ಉಂಟಾದ ಅಗ್ನಿ ದುರಂತದಲ್ಲಿ ಕೃಷಿಕ ಗಣೇಶ್ ರೈ ಬೂಡಿಯಾರು ಅವರಿಗೆ ಸೇರಿದ ಅಡಿಕೆ ತೋಟ ಸಂಪೂರ್ಣ ಸುಟ್ಟು ಕರಕಲಾಗಿ ಅಪಾರ ನಷ್ಟ ಸಂಭವಿಸಿದೆ.
ದುರಂತ ನಡೆದ ಸ್ಥಳಕ್ಕೆ ನಿನ್ನೆ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ ಮಾಡಿ ಸರಕಾರ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರು ಸತೀಶ್ ಕುಂಪಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು ಸುನೀಲ್ ಆಳ್ವ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು , ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾದ ಅಧ್ಯಕ್ಷರು ಹರೀಶ್ ಬಿಜತ್ರೆ , ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ದಡ್ಡು , ಲೋಕೇಶ್ ಚಾಕೋಟೆ , ದ.ಕ ಜಿಲ್ಲಾ ಟೆಲಿಕಾಂ ಸಲಹಾ ಸಮಿತಿ ಸದಸ್ಯ ನಿತೀಶ್ ಕುಮಾರ್ ಶಾಂತಿವನ ಸ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ , ಜಿಲ್ಲಾ ಬಿಜೆಪಿ ಮಾಜಿ ಉಪಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ , ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
























