ಸಹೋದ್ಯೋಗಿಯ ಕಿರುಕುಳದಿಂದ ನೊಂದು ಠಾಣೆಯಲ್ಲೇ ಹೆಡ್‌ಕಾನ್‌ಸ್ಟೆಬಲ್‌ ಆತ್ಮಹತ್ಯೆ

ಡೆತ್‌ನೋಟ್‌ ಬರೆದಿಟ್ಟು ಸಾವಿಗೆ ಶರಣಾದ ಹೆಡ್‌ಕಾನ್‌ಸ್ಟೆಬಲ್‌ ಮುಹಮ್ಮದ್‌ ಝಕ್ರಿಯಾ

ಶಿವಮೊಗ್ಗ : ಸಹೋದ್ಯೋಗಿಯ ಕಿರುಕುಳದಿಂದ ನೊಂದು ಶಿವಮೊಗ್ಗ ಸಂಚಾರ ಪೊಲೀಸ್‌ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಮುಹಮ್ಮದ್‌ ಝಕ್ರಿಯಾ (55) ಎಂಬವರು ಡೆತ್‌ನೋಟ್ ಬರೆದಿಟ್ಟು ಪಶ್ಚಿಮ ಸಂಚಾರ ಠಾಣೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮುಹಮ್ಮದ್‌ ಝಕ್ರಿಯಾ (55) ಕಳೆದ ಕೆಲವು ದಿನಗಳಿಂದ ರಜೆ ಮೇಲೆ ಇದ್ದು, ಮೂರು ದಿನಗಳ ಹಿಂದಷ್ಟೇ ಕರ್ತವ್ಯಕ್ಕೆ ಹಾಜರಾಗಿದ್ದರು. ಬುಧವಾರ ರಾತ್ರಿ ಶಿವಮೊಗ್ಗ ಬಸ್ ನಿಲ್ದಾಣದ ಬಳಿ ಡ್ಯೂಟಿ ನಿರ್ವಹಿಸಿ ನಂತರ ಠಾಣೆಗೆ ವಾಪಸಾಗಿದ್ದರು ಎಂದು ಮೂಲಗಳು ತಿಳಿಸಿವೆ. ರಾತ್ರಿ ವೇಳೆ ಪಶ್ಚಿಮ ಸಂಚಾರ ಠಾಣೆಯ ಹಿಂಬದಿ ಸೆಲ್‌ಗಳಿರುವ ಪ್ರದೇಶದಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.





















































 
 

ನನ್ನ ಹಿರಿಯ ಅಧಿಕಾರಿಗಳು ಹಾಗೂ ನನ್ನ ಪ್ರೀತಿಯ ಗೆಳೆಯ ಹಾಗೂ ತಮ್ಮ ಆದಿಲ್ ಹಾಗೂ ನಮ್ಮ ಠಾಣೆಯ ಸಹೋದ್ಯೋಗಿಗಳೆ ನಮಸ್ಕಾರಗಳು, ನಾನು ಇಲಾಖೆಯಲ್ಲಿ 26 ವರ್ಷ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದೇನೆ. ಕಳೆದ ಒಂದು ವರ್ಷದಿಂದ ನಮ್ಮ ಠಾಣೆಯ ನಾಸೀರ್ ಅಹಮದ್ (ಹೆಚ್‌ಸಿ 131) ನನಗೆ ಮಾನಸಿಕ ಕಿರುಕುಳ ನೀಡುತ್ತಿದ್ದು, ಜಗಳ ಮಾಡಿ ನನ್ನ ಬಗ್ಗೆ ಸಾರ್ವಜನಿಕವಾಗಿ ಅಪಪ್ರಚಾರ ಮಾಡಿದ್ದಾರೆ. ಉಡುಪಿ ಪಿಎಂ ಬಂದೋಬಸ್ತ್‌ಗೆ ಹೋದ ಸಂದರ್ಭದಲ್ಲೂ ಬೇರೆ ಜಿಲ್ಲೆಗಳ ಸಿಬ್ಬಂದಿಗಳ ಬಳಿ ನನ್ನ ವಿರುದ್ಧ ಅಪಪ್ರಚಾರ ಮಾಡಿದ್ದಾರೆ. ಇದರಿಂದ ನನಗೆ ಮಾನಸಿಕವಾಗಿ ತೀವ್ರ ನೋವಾಗಿದೆ ಹಾಗೂ ಆರೋಗ್ಯ ಸಮಸ್ಯೆಯೂ ಉಂಟಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನಾನು ನಮ್ಮ ಠಾಣೆಯ ವಿಚಾರವನ್ನು ಮನೆಯಲ್ಲಿ ಯಾರತ್ರ ಹೇಳಿಕೊಳ್ಳುವುದಿಲ್ಲ, ಆದರೆ ಜಗಳ ಮಾಡಿದ ಬಗ್ಗೆ ಆದಿಲ್ ಹತ್ತಿರ ಹೇಳಿಕೊಂಡಿರುತ್ತೇನೆ ಹಾಗೂ ನನ್ನ ಬಗ್ಗೆ, ನನ್ನ ಕರ್ತವ್ಯದ ಬಗ್ಗೆ ರಾಧಾ ಮೇಡಂ ಹಾಗೂ ಕವಿತಾ ಮೇಡಂ ಹತ್ತಿರ ಅವನಿಗೆ ಯಾಕೆ ಅಲ್ಲಿ ಹಾಕಿದಿರಿ ಇಲ್ಲಿ ಹಾಕಿದ್ದೀರಿ ಅಂತ ಕೇಳುತ್ತಾನೆ ಹಾಗೂ ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಾನೆ. ಇದರಿಂದ ನಾನು ನೊಂದು ಆತ್ಮಹತ್ಯೆ ಮಾಡಿಕೊಂಡಿರುತ್ತೇನೆ. ನನ್ನ ಸಾವಿಗೆ ನಾಸೀರ್ ಅಹ್ಮದ್ ಹೆಚ್ ಸಿ 131 ಕಾರಣ ಎಂದು ಡೆತ್‌ನೋಟ್‌ನಲ್ಲಿ ಮುಹಮ್ಮದ್‌ ಝಕ್ರಿಯಾ ಬರೆದಿದ್ದಾರೆ. ದ್ದಾರೆ

ಮುಹಮ್ಮದ್‌ ಝಕ್ರಿಯಾಗೆ ಆರೋಗ್ಯ ಸಮಸ್ಯೆಯೂ ಇತ್ತು. ವಾಟ್ಸಪ್ ಗ್ರೂಪ್‌ನಲ್ಲಿ ಡೆತ್‌ನೋಟ್ ಫಾರ್ವರ್ಡ್ ಮಾಡಿದ್ದಾರೆ. ಅದರಲ್ಲಿ ಠಾಣೆಯ ಸಿಬ್ಬಂದಿ ಕಿರುಕುಳ ನೀಡುತ್ತಿದ್ದರು ಎಂದು ಉಲ್ಲೇಖವಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅವರ ಕುಟುಂಬದವರ ಗಮನಕ್ಕೆ ತಂದಿದ್ದೇವೆ. ಅವರ ಕುಟುಂಬದವರು ದೂರು ಕೊಟ್ಟ ಬಳಿಕ ವಿಚಾರಣೆ ನಡೆಸುತ್ತೇವೆ ಎಂದು ವರಿಷ್ಠಾಧಿಕಾರಿ ನಿಖಿಲ್ ಬಿ. ತಿಳಿಸಿದ್ದಾರೆ.

error: Content is protected !!
Scroll to Top