ಆಸ್ಕರ್‌ ಪ್ರಶಸ್ತಿ ರೇಸ್‌ಗೆ ಕಾಂತಾರ-ಚಾಪ್ಟರ್ 1 ಎಂಟ್ರಿ

ʻಮಹಾವತಾರ್‌ ನರಸಿಂಹʼ ಅನಿಮೇಟೆಡ್‌ ವಿಭಾಗದಲ್ಲಿ ಸ್ಪರ್ಧೆ

ಬೆಂಗಳೂರು : ಕನ್ನಡದ ಯಶಸ್ವಿಯಾದ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ: ಚಾಪ್ಟರ್ 1’ ಚಿತ್ರ ಆಸ್ಕರ್ ಸ್ಪರ್ಧೆಗೆ ಪ್ರವೇಶ ಪಡೆದುಕೊಂಡಿದೆ. ʻಮಹಾವತಾರ್‌ ನರಸಿಂಹʼ ಹಾಗೂ ʻಕಾಂತಾರ: ಅಧ್ಯಾಯ 1ʼ ಚಿತ್ರಗಳು ಅಧಿಕೃತವಾಗಿ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಸ್ಥಾನ ಪಡೆದುಕೊಂಡಿವೆ. ಇದು ಭಾರತೀಯ ಚಿತ್ರರಂಗಕ್ಕೆ ಹೆಮ್ಮೆಯ ಕ್ಷಣವಾಗಿದೆ.

ಆಸ್ಕರ್‌ ಪ್ರಶಸ್ತಿ ರೇಸ್‌ನಲ್ಲಿರುವ ಚಿತ್ರಗಳ ಅಂತಿಮ ಪಟ್ಟಿ ಜ.22 ರಂದು ಪ್ರಕಟವಾಗಲಿದೆ. ಮಾರ್ಚ್‌ 15 ರಂದು ಚಿತ್ರಗಳಿಗೆ ಆಸ್ಕರ್‌ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ವರ್ಷ ‘ಕಾಂತಾರ-1’ ಹಾಗೂ ‘ಮಹಾವತಾರ್‌ ನರಸಿಂಹ’ ಚಿತ್ರಗಳು ತೆರೆಕಂಡು ಜನಮನ ಗೆದ್ದಿದ್ದವು. ಚಿತ್ರಗಳನ್ನು ಆಸ್ಕರ್ ವೇದಿಕೆಗೆ ಕೊಂಡೊಯ್ಯುವ ಪ್ರಯತ್ನ ಮಾಡುವುದಾಗಿ ಹೊಂಬಾಳೆ ಸಂಸ್ಥೆ ಹೇಳಿತ್ತು. ಆನಿಮೇಟೆಡ್‌ ವಿಭಾಗದಲ್ಲಿ ‘ಮಹಾವತಾರ್‌ ನರಸಿಂಹ’ ಜನರಲ್‌ ಲಿಸ್ಟ್‌ನಲ್ಲಿ ಸ್ಥಾನ ಪಡೆದಿವೆ. ಈ ವರ್ಷದ ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಕಾಣಿಸಿಕೊಂಡ 5 ಭಾರತೀಯ ಚಿತ್ರಗಳಲ್ಲಿ 2 ಹೊಂಬಾಳೆ ಫಿಲ್ಮ್ಸ್‌ ಬ್ಯಾನರ್ ಸಿನಿಮಾ ಇರುವುದು ಮತ್ತೊಂದು ವಿಶೇಷ.





















































 
 

‘ಕಾಂತಾರ ಚಾಪ್ಟರ್‌ – 1 ಹಾಗೂ ʻಮಹಾವತಾರ್‌ ನರಸಿಂಹʼ ಎರಡೂ ಚಿತ್ರಗಳು ಆಸ್ಕರ್ ಜನರಲ್ ಎಂಟ್ರಿ ಲಿಸ್ಟ್‌ನಲ್ಲಿ ಜಾಗ ಮಾಡಿಕೊಂಡು ಆಸ್ಕರ್ ವಿಭಾಗದಲ್ಲಿ ಪರಿಗಣನೆಗೆ ಒಳಪಟ್ಟಿವೆ. ಈವರೆಗೆ ಭಾರತದ ಕೆಲ ಡಾಕ್ಯುಮೆಂಟರಿ, ಶಾರ್ಟ್‌ ಫಿಲ್ಮ್‌ಗಳಿಗೆ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ. ಫೀಚರ್ ಸಿನಿಮಾಗಳ ವಿಭಾಗದಲ್ಲಿ ಭಾರತದಲ್ಲಿ ನಿರ್ಮಾಣವಾದ ಯಾವುದೇ ಚಿತ್ರಕ್ಕೆ ಆಸ್ಕರ್ ಸಿಕ್ಕಿಲ್ಲ. ಭಾರತೀಯ ಚಿತ್ರರಂಗದ ಈ ಎರಡೂ ಸಿನಿಮಾಗಳು ಈಗ ಹಾಲಿವುಡ್ ಸಿನಿಮಾಗಳ ಜೊತೆ ಆಸ್ಕರ್ ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿವೆ. ಈ ಮೊದಲು ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ದಾಖಲೆ ಬರೆದಿತ್ತು. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ರೇಸ್​​ನಲ್ಲಿ ಈ ಹಾಡು ಸ್ಥಾನ ಪಡೆದುಕೊಂಡಿತ್ತು.

‘ಕಾಂತಾರ: ಚಾಪ್ಟರ್ 1’ ಚಿತ್ರವನ್ನು ರಿಷಬ್ ನಿರ್ದೇಶನ ಮಾಡಿ, ನಟಿಸಿದ್ದಾರೆ. ರುಕ್ಮಿಣಿ ವಸಂತ್, ಜಯರಾಮ್, ಗುಲ್ಶನ್ ದೇವಯ್ಯ ಸೇರಿದಂತೆ ಅನೇಕರು ಚಿತ್ರದಲ್ಲಿ ನಟಿಸಿದ್ದಾರೆ. ʻಕಾಂತಾರ ಚಾಪ್ಟರ್-1‌ʼ ಸಿನಿಮಾ ಆಸ್ಕರ್ ಅಂತಿಮ ನಾಮಿನೇಷನ್ ಪಟ್ಟಿಗೆ ಎಂಟ್ರಿ ಕೊಟ್ಟರೂ ಅದು ದೊಡ್ಡ ಸಾಧನೆ ಆಗಲಿದೆ.

error: Content is protected !!
Scroll to Top