ಚಾರ್ಮಾಡಿ ಘಾಟಿಯಲ್ಲಿ ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ

ಚಾಲಕ ಸಹಿತ ಮೂವರು ಅದೃಷ್ಟವಶಾತ್‌ ಪಾರು

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ 3 ಗಂಟೆಯ ವೇಳೆ ಸಂಭವಿಸಿದೆ.

ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ದಳದವರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಚಾರ್ಮಾಡಿ ಘಾಟಿಯಲ್ಲಿ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.





















































 
 

ಲಾರಿಯ ಟಯರ್‌ನ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿ ಲಾರಿಯಲ್ಲಿದ್ದ ಮೆಕ್ಕೆಜೋಳ ಸಹಿತ ಲಾರಿಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬೆಂಕಿಯ ತೀವ್ರತೆಯಿಂದ ಘಾಟಿಯ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ. ಘಟನೆ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

error: Content is protected !!
Scroll to Top