ಉಪ್ಪಿನಂಗಡಿ: ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಉಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧರ್ಮದರ್ಶಿಯವರು ಸೇವಾ ರೂಪದಲ್ಲಿ ನೀಡಿದ ಶುದ್ಧ ಕುಡಿಯುವ ನೀರಿನ ಘಟಕವನ್ನು ಡಾ. ಯೋಗಿಂದ್ರ ಭಟ್ ಉಳಿ ಉದ್ಘಾಟಿಸಿ, ಶುಭ ಹಾರೈಸಿದರು.
ಯಕ್ಷದ್ರುವ ಪಟ್ಲ ಫೌಂಡೇಶನ್ ಸ್ಥಾಪಕ ಅಧ್ಯಕ್ಷ ಭಾಗವತ ಪಟ್ಲ ಸತೀಶ್ ಶೆಟ್ಟಿ, ದೇವಸ್ಥಾನದ ಆಡಳಿತ ಸೇವಾ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ, ಕಾರ್ಯದರ್ಶಿ ಪ್ರಶಾಂತ ಪೈ, ಪವಿತ್ರ ಪಾಣಿ ಸೂರ್ಯನಾರಾಯಣ ಕುದ್ದಣ್ಣಾಯ, ಅರ್ಚಕ ಗುರುಪ್ರಸಾದ ನೂರಿತ್ತಾಯ, ವಾಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಬಾರ್ಯ ಸಿ.ಎ. ಬ್ಯಾಂಕಿನ ಅಧ್ಯಕ್ಷ ಸೇಸಪ್ಪ ಸಾಲಿಯಾನ್, ಯಜ್ಞೇಶ್ ಪುತ್ತಿಲ, ಸೇವಾ ಟ್ರಸ್ಟಿನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನೀರಿನ ಘಟಕವನ್ನು ಕೊಡುಗೆಯಾಗಿ ನೀಡಿದ ಡಾ. ಯೋಗಿಂದ್ರ ಭಟ್ಟರಿಗೆ ದೇವಸ್ಥಾನದ ಪರವಾಗಿ ಟ್ರಸ್ಟಿನ ಅಧ್ಯಕ್ಷ ಭಾಸ್ಕರ ಬಾರ್ಯ ಕೃತಜ್ಞತೆ ಸಲ್ಲಿಸಿದರು.
























