ಬಾಂಗ್ಲಾದೇಶದ ಅಕ್ರಮ ವಲಸಿಗರ ಶೆಡ್‌ಗಳು ಬೆಂಕಿಗಾಹುತಿ

ತೆರವು ಮಾಡಿದ ಬಳಿಕ ಮತ್ತೆ ಬಂದು ನೆಲೆಸಿದ್ದ ವಲಸಿಗರು

ಬೆಂಗಳೂರು: ಅಕ್ರಮ ಬಾಂಗ್ಲಾದೇಶದ ವಲಸಿಗರು ನೆಲೆಸಿದ್ದ ಶೆಡ್‌ಗಳು ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಬೆಂಕಿಗಾಹುತಿಯಾದ ಘಟನೆ ಬೆಂಗಳೂರು ಹೊರವಲಯದ ಬೇಗೂರಿನ ಎಳೇನಹಳ್ಳಿಯಳ್ಳಿಯಲ್ಲಿರುವ ಡಂಪಿಂಗ್ ಯಾರ್ಡ್‌ನಲ್ಲಿ ನಡೆದಿದೆ.

5 ಎಕ್ರೆ ಜಾಗದಲ್ಲಿ ಅಕ್ರಮವಾಗಿ ನೆಲೆಸಿದ್ದ ಅಕ್ರಮ ಬಾಂಗ್ಲಾದೇಶೀಯರನ್ನು ಕೆಲ ದಿನಗಳ ಹಿಂದೆ ಸ್ಥಳದಿಂದ ತೆರವುಗೊಳಿಸಲಾಗಿತ್ತು. ಆದರೆ ರಾತ್ರೋರಾತ್ರಿ ಮತ್ತೆ ವಲಸಿಗರು ಇಲ್ಲಿಗೆ ಆಗಮಿಸಿ ಶೆಡ್‌ ಹಾಕಿದ್ದರು.





















































 
 

ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಶೆಡ್‌ಗಳು ಹೊತ್ತಿ ಉರಿದಿದ್ದು ಆಗಸದೆತ್ತರಕ್ಕೆ ಬೆಂಕಿಯ ಕೆನ್ನಾಲಿಗೆ ಚಾಚಿತ್ತು. ವಿಚಾರ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿ ಹೊತ್ತಿಕೊಂಡ ಕಾರಣದ ಬಗ್ಗೆ ಸಿಬ್ಬಂದಿ ಈಗ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!
Scroll to Top