ಧನುಪೂಜೆಗೆಂದು ಹೋಗಿದ್ದ ಬಾಲಕ ಸಾವು ಪ್ರಕರಣ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಗಿದ್ದೇನು ಗೊತ್ತಾ?

ಬೆಳ್ತಂಗಡಿ: ದೇವಸ್ಥಾನಕ್ಕೆ ಧನು ಪೂಜೆಗೆಂದು ಹೊರಟು ತೋಟದ ಕೆರೆಯಲ್ಲಿ ಶವ ಪತ್ತೆಯಾದ ಸಂಭೋಳ್ಯದ ಸುಮಂತ್ (16) ಎಂಬ ಬಾಲಕನ ಮರಣೋತ್ತರ ಪರೀಕ್ಷೆ ನಡೆದಿದ್ದು, ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಅಂಶ ಬಯಲಾಗಿದೆ.

ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ರೀತಿಯ ಆಯುಧದಿಂದ ಬಲವಾದ ಪೆಟ್ಟು ಬಿದ್ದಿದೆ. ಆತ ಅರೆಪ್ರಜ್ಞಾವಸ್ಥೆಯಲ್ಲಿ ಕೆರೆಗೆ ಬಿದ್ದಿರುವ ಸಾಧ್ಯತೆ ಇದ್ದು, ಆತನ ಶ್ವಾಸಕೋಶದಲ್ಲಿ ನೀರು ತುಂಬಿದ್ದ ಅಂಶ ಸಹ ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ.

ಬಾಲಕನನ್ನು ಯಾರೋ ಕೊಲೆ ಮಾಡಿದ್ದಾರೆ ಎನ್ನುವ ಸಂದೇಹ ಬಲವಾಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟು ಪ್ರಕರಣವನ್ನು ಬೇಧಿಸುವ ಕಾರ್ಯದಲ್ಲಿ ತೊಡಗಿದ್ದಾರೆ.





















































 
 

ಮೃತ ಬಾಲಕನ ದೇಹ ಮನೆಯವರಿಗೆ ದೊರೆತಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

error: Content is protected !!
Scroll to Top